ವಿಜಯಪುರ | ದಲಿತ ದೌರ್ಜನ್ಯ ತಡೆಗೆ ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ದಸಂಸ ಆಗ್ರಹ

Date:

ದಲಿತ ದೌರ್ಜನ್ಯ ತಡೆಗೆ ವಿಶೇಷ ಪೊಲೀಸ್ ಠಾಣೆ ತೆರೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ ವಾದ) ವಿಜಯಪುರ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.

- Advertisement -

ಜಿಲ್ಲಾ ಪ್ರಧಾನ ಸಂಚಾಲಕ ಸಂಜು ವೈ ಕಂಬಾಗಿ ಮಾತನಾಡಿ, “ಇತ್ತೀಚೆಗೆ ರಾಜ್ಯದಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಪ್ರಕರಣಗಳು ದಿನಂಪ್ರತಿ ಹೆಚ್ಚಾಗುತ್ತಿದ್ದು, ಇದರಿಂದ ದಲಿತರಿಗೆ ನ್ಯಾಯ ಸಿಗುತ್ತಿಲ್ಲ. ಕೇವಲ ಶೋಷಣೆಯಲ್ಲಿಯೇ ಬದುಕು ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ತ್ವರಿತ ನ್ಯಾಯಕ್ಕಾಗಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“1989ರ ಪ್ರಕಾರ ದಲಿತರ ಮೇಲಾದ ದೌರ್ಜನ್ಯದ ಕುರಿತು ದೌರ್ಜನ್ಯ ಪ್ರಕರಣ ದಾಖಲಿಸಿದರೆ ಅದರ ವಿರುದ್ಧವಾಗಿ ಕೌಂಟರ್‌ ಕೇಸ್‌ಗಳು ದಾಖಲಾಗುತ್ತಿವೆ. ಆದ್ದರಿಂದ ಇಂತಹ ಕೌಂಟರ್ ಕೇಸ್‌ಗಳ ವಿರುದ್ಧ ರಾಜ್ಯದಲ್ಲಿ ತ್ವರಿತ ನ್ಯಾಯಕ್ಕಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಠಾಣೆಗಳನ್ನು ತೆರೆಯುವ ಮೂಲಕ ದಲಿತರಿಗೆ ನ್ಯಾಯ ದೊರಕಿಸಿಕೊಡಬೇಕು. ಈ ಕುರಿತು ರಾಜ್ಯದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಮಾಡಬೇಕು” ಎಂದು ಆಗ್ರಸಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯ ಅಗತ್ಯ: ಪ್ರೊ.ಓಂಕಾರ ಕಾಕಡೆ

ಮಹಿಳಾ ಒಕ್ಕೂಟದ ಸಂಚಾಲಕಿ ಸವಿತಾ ವಗ್ಗರ, ಜಿಲ್ಲಾ ಸಂಘಟನಾ ಸಂಚಾಲಕರಾದ ಚೇತನ ತೊರವಿ, ಯಲ್ಲಪ್ಪ ಕಾಂಬಳೆ, ಭೀಮಣ್ಣ ಹಂಚಿನಾಳ, ಭಾಸ್ಕರ ಬೋರಗಿ, ಸುಖದೇವ ಕಟ್ಟಿಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...