ವಿಜಯಪುರ | ʼದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮಶುದ್ಧಿಗೊಳಿಸುತ್ತವೆʼ

Date:

Advertisements

ಕನ್ನಡದ ಮೊದಲ ವಚನಕಾರ ದೇವರ ದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮ ಶುದ್ದಿಗೊಳಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಂ ನಾಗರಾಜ ಹೇಳಿದರು.

ವಿವಿಯಲ್ಲಿ ಆಯೋಜಿಸಿದ್ದ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ದೇವರ ದಾಸಿಮಯ್ಯ ಅವರ ವಚನಗಳು ಸಮಾಜದಲ್ಲಿ ಮಹತ್ವದ ಪರಿವರ್ತನೆಗಳನ್ನು ಉಂಟುಮಾಡುವ ಶಕ್ತಿ ಹೊಂದಿವೆ. ಅವರ ವಚನಗಳಲ್ಲಿ ಶ್ರಮಪೂಜೆ, ಭಕ್ತಿ, ಮಾನವೀಯತೆ ಮತ್ತು ಸಮಾನತೆಯ ಆದರ್ಶಗಳು ಸ್ಪಷ್ಟವಾಗಿ ಪ್ರತಿಫಲಿಸುತ್ತವೆ. ಅವರ ವಚನಗಳು ಕೇವಲ ಭಕ್ತಿಯ ಸಾರವಲ್ಲ, ಅದು ಬದುಕಿನ ನೈತಿಕ ಮೌಲ್ಯಗಳಿಗೂ ದಾರಿದೀಪವಾಗಿದೆ. ಹೊಸ ತಲೆಮಾರಿಗೆ ದಾಸಿಮಯ್ಯನ ವಚನಗಳು ಸೌಹಾರ್ದತೆ, ಸತ್ಕಾರ್ಯ ಮತ್ತು ಮಾನವೀಯತೆಯ ಆಧಾರಶಿಲೆಯಾಗಿ ಕಾರ್ಯನಿರ್ವಹಿಸುತ್ತವೆ” ಎಂದರು.

ವಿವಿಯ ಯುಜಿ ಸ್ನಾತಕ ವಿಭಾಗದ ವಿಶೇಷಾಧಿಕಾರಿ ಪ್ರೊ. ಸಕಾಲ ಹೂವಣ್ಣ ಮಾತನಾಡಿ, “ದೇವರ ದಾಸಿಮಯ್ಯ ಅವರ ವಚನಗಳು ಇಂದಿಗೂ ಸಮಾಜದ ಸುಧಾರಣೆಗೆ ಪ್ರೇರಣೆಯಾಗಿದ್ದು, ಅವು ಬದುಕಿಗೆ ಮಾರ್ಗದರ್ಶಕ ಬೆಳಕಾಗಿ ಕೆಲಸ ಮಾಡುತ್ತವೆ. ವಿದ್ಯಾರ್ಥಿನಿಯರು ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜ್ಞಾಪಿಸಿಕೊಳ್ಳಬೇಕು” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ಕಾರ್ಯಕ್ರಮದಲ್ಲಿ ವಿಭಾಗದ ಸಂಯೋಜಕಿ ಡಾ. ಜಿ ಸೌಭಾಗ್ಯ, ಡಾ. ಚೆಲುವರಾಜು, ಸಾಂಸ್ಕೃತಿಕ ಸಂಯೋಜಕ ಡಾ. ಮೆಹರಾಜ್ ಹಾಗೂ ಬೋಧಕ , ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X