ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

Date:

ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಿಂದ ರಾಜ್ಯಪಾಲರಿಗೆ ಆರ್ಥಿಕವಾಗಿ ಹಿಂದುಳಿದ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಘೋಷಣೆ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿತು.

- Advertisement -

ದವಿಪ ಮುಖಂಡ ಅಕ್ಷಯ ಕುಮಾರ ಅಜಮನಿ ಮಾತನಾಡಿ, “ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಅರಿವು ಬಹುದೊಡ್ಡದಾಗಿದೆ. ತಂತ್ರಜ್ಞಾನವಿಲ್ಲದ ಕ್ಷೇತ್ರ ಜಗತ್ತಿನಲ್ಲಿಯೇ ಯಾವುದೂ ಇಲ್ಲದಂತಾಗಿದೆ. ಹತ್ತು ಜನ ಕೆಲಸ ನಿರ್ವಹಿಸುವ ಕೆಲಸವನ್ನು ತಂತ್ರಜ್ಞಾನದ ಮೂಲಕ ಒಬ್ಬರೇ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಪದವಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ತಂತ್ರಜ್ಞಾನದ ಕಲಿಕೆ ಬಹಳ ಅವಶ್ಯಕವಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಹೆಚ್ಚಿನ ಕಲಿಕೆಗೆ ಅನುಕೂಲ ವಾಗುತ್ತದೆ. ಸರ್ಕಾರಿ ನೌಕರಿ ಕ್ಷೀಣಿಸುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಲ್ಯಾಪ್ ಟಾಪ್ ತುಂಬಾ ಅವಶ್ಯಕವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ತಮ್ಮ ತಮ್ಮ ವಯಕ್ತಿಕ ಜೀವನವನ್ನು ರೂಪಿಸಿಕೊಳ್ಳಲು, ತಮ್ಮದೇ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುವ ಯೋಜನೆ ಇದಾಗಿದೆ. ತಾವು ಹಿಂದೆ ನೀಡಿದ ಇದೇ ಯೋಜನೆಯಿಂದ ಎಷ್ಟೋ ಯುವಕರು ತಮ್ಮ ಬದುಕನ್ನ ಸಾಗಿಸುತ್ತಿದ್ದಾರೆ. ಆದ್ದರಿಂದ ಮತ್ತೆ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಮುಂದಿನ ಯುವಪೀಳಿಗೆಗೆ ಉತ್ತೇಜನವಾಗುತ್ತದೆ. ಈ ಯೋಜನೆಯನ್ನ ಸದುಪಯೋಗ ಪಡೆದುಕೊಂಡ ಯುವ ಪೀಳಿಗೆ ನಿಮ್ಮನ್ನ ಸ್ಮರಿಸುತ್ತಾರೆ” ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

ಈ ವೇಳೆ ದಾವುದ ನಯ್ಕೊಡಿ, ಪ್ರಶಾಂತ್ ದಾಂಡೇಕರ್, ಮಾದೇಶ ಚಾಲವಾದಿ, ಶಂಕರ ಬಸರಗಿ, ಯುವರಾಜ ಓಲೇಕಾರ, ಪಂಡಿತ್ ಯಲಗೋಡ, ಮಾಂತೇಶ ಚಲವಾದಿ, ತಲಾ ರಾಠೋಡ, ವಿವಿಯ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...