ವಿಜಯಪುರ | ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಪ್ರತಿಭಟನೆ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು.

- Advertisement -

ವಿಜಯಪುರ ನಗರದ ಗಾಂಧಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, “ವಿದ್ಯಾರ್ಥಿಗಳ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಯುತ್ತಾ ಬಂದರೂ ಸರ್ಕಾರ ಇಲ್ಲಿಯವರೆಗೂ ಲ್ಯಾಪ್‌ಟಾಪ್ ವಿತರಣೆ ಮಾಡುತ್ತಿಲ್ಲ. ಈ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನದ ಜೊತೆಗೆ ತಂತ್ರಜ್ಞಾನದ ಜ್ಞಾನವೂ ತುಂಬಾ ಅಗತ್ಯವಾಗಿದೆ. ಆಗಲೇ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದರೆ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡದೇ ವಂಚಿಸುತ್ತಿದ್ದು ಖಂಡನೀಯವಾಗಿದೆ” ಎಂದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಸರ್ಕಾರ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ: ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

ಪ್ರತಿಭಟನೆಯಲ್ಲಿ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ, ಮುಖಂಡರಾದ ಸಂದೇಶ ಕುಮುಟಗಿ, ಪ್ರಶಾಂತ್ ದಾಂಡೇಕರ್, ಯಾಷಿನ್ ಇನಾಮದಾರ್, ಯಮನೂರಿ ಮಾದರ, ಸಾಗರ್ ಕಲಕೇರಿ, ಸಿದ್ದು, ಪ್ರವೀಣ್, ಸಂತೋಷ್, ಹಣಮಂತ್, ಸೌಮ್ಯ ಜುಮದಿ, ಲಕ್ಷ್ಮಿ ಸಾತಿಹಾಳ, ಲಕ್ಷ್ಮಿ ಹಂಡಿಗಿ, ಪ್ರೇಮಾ ಚಲವಾದಿ, ಲಕ್ಷ್ಮಿ ಬನ್ನೂರ್, ಐಶ್ವರ್ಯ ಅತರ್ಗ,
ಅಕ್ಷತಾ ಭೇಣ, ಶ್ರೀನಾಥ್ ಪವಾರ, ಗಿರೀಶ್ ಇಜೀರಿ, ಸಚಿನ್ ರಾಠೋಡ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...