ವಿಜಯಪುರದ ನೌಬಾಗ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆ ಮಾಡುವಂತೆ ಆಗ್ರಹಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಮಾತನಾಡಿ, “ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಅರಿವು ಬಹು ದೊಡ್ಡದಾಗಿದೆ. ತಂತ್ರಜ್ಞಾನವಿಲ್ಲದ ಕ್ಷೇತ್ರ ಜಗತ್ತಿನಲ್ಲಿಯೇ ಯಾವುದೂ ಇಲ್ಲದಂತಾಗಿದೆ. ಹತ್ತು ಜನ ಕೆಲಸ ನಿರ್ವಹಿಸುವ ಕೆಲಸವನ್ನ ತಂತ್ರಜ್ಞಾನದ ಮೂಲಕ ಒಬ್ಬರೇ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಪದವಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ತಂತ್ರಜ್ಞಾನದ ಕಲಿಕೆ ಬಹಳ ಅವಶ್ಯಕವಾಗಿದೆ. ಎಸ್ಸಿ, ಎಸ್‌ಟಿ, ಒಬಿಸಿ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಹೆಚ್ಚಿನ ಕಲಿಕೆಗೆ ಅನುಕೂಲ ವಾಗುತ್ತದೆ. ಸರ್ಕಾರಿ ನೌಕರಿ ಕ್ಷೀಣಿಸುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಲ್ಯಾಪ್‌ಟಾಪ್ ತುಂಬಾ ಅವಶ್ಯಕವಾಗಿದೆ” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಾಗರ್ ಕಲಕೇರಿ, ಪ್ರಶಾಂತ್ ದಾಂಡೇಕರ್, ಮಾದೇಶ್ ಚಲವಾದಿ, ಶಂಕರ್ ಬಸರಗಿ, ಯುವರಾಜ್ ಓಲೇಕಾರ್, ಪಂಡಿತ್ ಯಲಗೋಡ, ಮಾಂತೇಶ ಚಲವಾದಿ ಸೇರಿದಂತೆ ಇತರರು ಇದ್ದರು.
ಇದನ್ನೂ ಓದಿ: ವಿಜಯಪುರ | ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ