ವಿಜಯಪುರ | ಬೆಳೆ ಹಾನಿ ಸಮೀಕ್ಷೆ ವರದಿಗೆ ಆಕ್ಷೇಪಣೆ ಸಲ್ಲಿಸಲು ಡಿಸಿ ಆನಂದ್ ಸೂಚನೆ

Date:

ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಕುರಿತು ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಹಶೀಲ್ದಾರ್‌ಗಳಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ ನೀಡಿದರು.

- Advertisement -

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯ 13 ತಾಲೂಕುಗಳಲ್ಲಿ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ನಡೆಸಿದ್ದು, 21683.9 ಹೆಕ್ಟೇರ್ ಕೃಷಿ ಹಾಗೂ 450 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಸಮೀಕ್ಷಾ ವರದಿಯನ್ನು ಜಿಲ್ಲೆಯ ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರ, ತಹಶೀಲ್ದಾರ ಕಾರ್ಯಾಲಯಗಳಲ್ಲಿ ಹಾನಿಗೊಳಗಾದ ಅಂತಿಮ ರೈತರ ಬೆಳೆಗಳ ಪಟ್ಟಿಯನ್ನು ಪ್ರಚುರಪಡಿಸಿ ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ವರದಿಯನ್ನು ವಿಂಗಡಿಸಿ ವರದಿಯನ್ನು ಸಲ್ಲಿಸಬೇಕು” ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಜಿಲ್ಲೆಯ 13 ತಾಲೂಕಿನ ತಹಶೀಲ್ದಾರಗಳ ನಿರ್ದೇಶನದಂತೆ ತಮ್ಮ ತಾಲೂಕಿನಲ್ಲಿ ಬೆಳ ಹಾನಿಯಾದ ರೈತ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ ಸೇರಿದಂತೆ ವಿವಿಧಡೆ ಪ್ರಚುರಪಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಎಲ್ಲ ತಹಶೀಲ್ದಾರಗಳು ಈಗಾಗಲೇ ಹಾನಿಯಾದ ಭಾಗಶ ಮನೆ, ಕಚ್ಚಾ ಮನೆಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ಮಳೆ ಸೇರಿದಂತೆ ಪ್ರಾಕೃತಿಕ ವಿಕೋಪದಿಂದ ರಸ್ತೆಗಳ ಸಂಪರ್ಕ ಕಡಿತಗೊಂಡಲ್ಲಿ ತಕ್ಷಣ ಸ್ಪಂದಿಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕಿನ ನೋಡಲ್ ಅಧಿಕಾರಿಗಳು ತಾಲೂಕಿನ ಸಮಗ್ರ ಮಾಹಿತಿ ಹೊಂದಿ, ವಿಪತ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಂಚಿತವಾಗಿಯೇ ಸಭೆಗಳನ್ನು ನಡೆಸಿ, ಸೂಕ್ತ ತಿಳುವಳಿಕೆ ಮೂಡಿಸಬೇಕು. ಜಿಲ್ಲೆಯಾದ್ಯಂತ ವಿಫಲವಾಗಿರುವ ಕೊಳವೆ ಬಾವಿಗಳಿದ್ದಲ್ಲಿ ಕೂಡಲೇ ಮುಚ್ಚಲು ಕ್ರಮ ವಹಿಸಬೇಕು. ಯಾವುದೇ ಅನಾಹುತಕ್ಕೆ ಅವಕಾಶ ನೀಡದೇ ಸಮರ್ಪಕವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...