ವಿಜಯಪುರ | ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹ; ಸೆ.22ರಂದು ವಕೀಲರ ಸಮಾವೇಶ

Date:

ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಚರ್ಚಿಸಲು ಬೆಳಗಾವಿ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 10ಕ್ಕೆ ವಕೀಲರ ಸಮಾವೇಶ ಸಂಘಟಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

- Advertisement -

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಮಂದಿ ವಕೀಲರು ಪಾಲ್ಗೊಂಡು ಮೀಸಲಾತಿ ಪಡೆಯಲು ಮುಂದೆ ಯಾವ ರೀತಿ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ, ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಬೇಕಾಗಿರುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಸುದೀರ್ಘ ಹೋರಾಟ ನಡೆಸಲಾಗುತ್ತಿದೆ” ಎಂದರು.

“ಪಂಚಮಸಾಲಿ ಮಕ್ಕಳ ಭವಿಷ್ಯಕ್ಕಾಗಿ ಪ್ರತಿಭಾನ್ವಿತರ ಅವಕಾಶಕ್ಕಾಗಿ ಪ್ರವರ್ಗ 2ಎ ಪಾದಯಾತ್ರೆ, ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆಯ ಗಮನ ಸೆಳೆಯುವುದು ಸೇರಿದಂತೆ ವಿವಿಧ ಹೋರಾಟಗಳನ್ನು ಕೈಗೊಳ್ಳಲಾಗಿತ್ತು. ಸಮುದಾಯದ ಶಾಸಕರು ಈ ಬಗ್ಗೆ ಧ್ವನಿ ಎತ್ತಲು ಸಭಾಧ್ಯಕ್ಷರಿಗೆ ಅವಕಾಶ ಕೋರಿದರೂ ಅವಕಾಶ ದೊರಕಲಿಲ್ಲ. ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊರತುಪಡಿಸಿ ಉಳಿದ ಶಾಸಕರು ಈ ಬಗ್ಗೆ ಪ್ರಬಲವಾಗಿ ಧ್ವನಿ ಎತ್ತಲಿಲ್ಲ. ನಮ್ಮ ಸಮುದಾಯದ ಶಾಸಕರು ಇನ್ನೂ ಪ್ರಬಲ ಹಾಗೂ ಪರಿಣಾಮಕಾರಿಯಾದ ಧ್ವನಿ ಮೊಳಗಿಸಬಹುದಿತ್ತು.‌ ಕಾನೂನಾತ್ಮಕ ಹೋರಾಟದ ಮೂಲಕ ಹಕ್ಕನ್ನು ಪಡೆದುಕೊಳ್ಳಲು ತೀರ್ಮಾ ಕೈಗೊಳ್ಳಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಟಗಾರರ ಶ್ರಮವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ ಎಂ ಪಾಟಿಲ, ಈರಣ್ಣ ಚಾಗಶೆಟ್ಟಿ, ವಕೀಲರಾದ ಶ್ರೀಶೈಲ್ ಮುಳಜಿ, ಬಿ ಎಂ ಪೊಲೀಸ್ ಪಾಟೀಲ್, ಜಿಲ್ಲಾ ಪಂಚಮಸಾಲಿ ಸಮಾಜದ ಕಾರ್ಯದರ್ಶಿ ನಿಂಗನಗೌಡ ಸೊಲ್ಲಾಪುರ, ನಗರ ಘಟಕದ ಅಧ್ಯಕ್ಷ ಶ್ರೀಶೈಲ್ ಬುಕ್ಕಣ್ಣಿ, ಜಿಲ್ಲಾ ಮಾಧ್ಯಮ ವಕ್ತಾರ ದಾನೇಶ್ ಅವಟಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...