ವಿಜಯಪುರ | ಇಂಗಳಗಿ-ಚಟ್ಟರಕಿ ಗ್ರಾಮ, ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹ

Date:

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ-ಚಟ್ಟರಕಿ ಗ್ರಾಮಗಳಿಗೆ ಓಡಾಡಲು ಹಾಗೂ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂಗಳಗಿ ಗ್ರಾಮಸ್ಥರು ತಹಶೀಲ್ದಾರ್ ಪ್ರಕಾಶ ಸಿಂದಗಿಯವರಿಗೆ ಮನವಿ ಮಾಡಿದರು.

- Advertisement -

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ರೈತರು “ತಮ್ಮ ಗ್ರಾಮದಿಂದ ಚಟ್ಟರಕಿಗೆ ತೆರಳಲು ಹಾಗೂ ಸುಮಾರು 150 ಜಮೀನುಗಳಿಗೆ ತರಳಲು ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪುನಃ ದೊರಕಿಸಿಕೊಡಬೇಕು” ಎಂದು ಅಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ್ ತಳಕೇರಿ ಮಾತನಾಡಿ, “ತಾಲೂಕಿನಲ್ಲಿ ರೈತರೇ ರೈತರಿಗೆ ಸಹಕಾರ ನೀಡುತ್ತಿಲ್ಲ. ಈಗ ಇಂಗಳಗಿ ಗ್ರಾಮದ ರೈತರೊಬ್ಬರು ತಮ್ಮ ಜಮೀನುಗಳ ಮೂಲಕ ತೆರಳುವ ರಸ್ತೆಯನ್ನು ಬಂದ್‌ ಮಾಡಿ ಯಾರೂ ತೆರಳದಂತೆ ಮಾಡಿದ್ದಾರೆ” ಎಂದು ಹೇಳಿದರು.
‌
‌”ಈ ರಸ್ತೆ ಸಾಕಷ್ಟು ವರ್ಷಗಳಿಂದ ಬಳಕೆಯಲ್ಲಿದ್ದು, ಗ್ರಾಮದ ಬಹುತೇಕರು ತಮ್ಮ ಜಮೀನುಗಳಿಗೆ ತೆರಳಲು ಇದೇ ರಸ್ತೆಯನ್ನು ಬಳಕೆ ಮಾಡುತ್ತಿದ್ದರು. ಈಗ ಏಕಾಏಕಿ ರಸ್ತೆ ಬಂದ್ ಮಾಡಿ ಇಲ್ಲಿ ರಸ್ತೆಯೇ ಇಲ್ಲ ಎನ್ನುತ್ತಿದ್ದಾರೆ. ಇನ್ನು ಗ್ರಾಮದ ನಕಾಶೆಯಲ್ಲಿಯೂ ಈ ರಸ್ತೆಯನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ರಸ್ತೆ ಇಲ್ಲವೆಂದರೆ ಹೇಗೆ? ಆದ್ದರಿಂದ ತಾವುಗಳೇ ಖುದ್ದಾಗಿ ಸ್ಥಳ, ನಕಾಶೆ ಪರಿಶೀಲನೆ ಮಾಡಿ ರಸ್ತೆ ದೊರಕಿಸಿಕೊಡಬೇಕು” ಎಂದು ತಹಶೀಲ್ದಾರರಲ್ಲಿ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

‌”ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಜಮೀನುಗಳ ರಸ್ತೆ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೆಲವು ರೈತರ ಅಸಹಕಾರ ನೀತಿಗಳಿಂದ ನ್ಯಾಯಾಲಯಗಳ ಮೆಟ್ಟಿಲೇರುತ್ತಿವೆ. ಒಂದಡೆ ಮುಖ್ಯಮಂತ್ರಿಗಳು ಇದರ ಜವಾಬ್ದಾರಿಯನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಿದ್ದರೂ ಕೂಡಾ ಪ್ರಕರಣ ಬಗೆಹರಿಯುತ್ತಿಲ್ಲ” ಎಂದರು.
‌
‌ಗ್ರಾಮದ ರೈತರ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
‌
‌ಯಮನೋರಿ ಸತಿಹಾಳ, ಆನಂದ ಕೊಣ್ಣೋರು, ಚನ್ನಬಸಪ್ಪ ಬಿರಾದಾರ, ರವಿ ಮಂಗಳೂರು, ಕಲ್ಲು ರಾವುರ್, ಶ್ರೀಶೈಲ್ ಸಾತಿಹಾಳ, ಸಿದ್ದನಗೌಡ ಗೊಡ್ಯಾಳ, ಬಸವರಾಜ ಬಿರಾದಾರ, ಬಸಪ್ಪ ಹರಿಜನ, ಶರನಗೌಡ ಅಂಬಳನೂರ್, ಕಾಶೀನಾಥ್ ಮಂಗಳೂರು ಹಾಗೂ ಸಿದ್ದನಗೌಡ ಕೊಣ್ಣೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...