ಕಳೆದ 30 ವರ್ಷಗಳಿಂದ ನಿವೃತ್ತ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯಾಗಿಲ್ಲ. ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಬೇಡಿಕೆಯಿಟ್ಟರೂ ಸ್ಪಂದನೆ ಸಿಗುತ್ತಿಲ್ಲ. ಕೂಡಲೇ ಪಿಂಚಣಿ ಪರಿಷ್ಕರಿಸಿ, ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಜಯಪುರ ಜಿಲ್ಲ ಘಟಕ ಅಖಿಲ ಭಾರತ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ನಾಯಕ ಮಾತನಾಡಿ, “ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಇರುವಂತೆ ದೇಶದ ಎಲ್ಲ ಬ್ಯಾಂಕ್ ನಿವೃತ್ತ ಸಿಬ್ಬಂದಿಗಳಿಗೂ ಸೌಲಭ್ಯ ನೀಡಬೇಕು” ಎಂದು ಆಗ್ರಹಿಸಿದರು.
ಒಕ್ಕೂಟದ ಜಂಟಿ ಕಾರ್ಯದರ್ಶಿ ಎಂ ಎಸ್ ಭಟ್ ಮಾತನಾಡಿ, “ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಜೀವನದ ಇಳಿ ವಯಸ್ಸಿನಲ್ಲಿ ಹೋರಾಟ ಮಾಡಬೇಕಾಗಿ ಬಂದದ್ದು ಖೇದಕರ. ಎಲ್ಲ ರಾಜ್ಯಗಳಲ್ಲೂ ಎಲ್ಲ ಜಿಲ್ಲೆಗಳಲ್ಲೂ ಈ ಹೋರಾಟ ವ್ಯಾಪಿಸುತ್ತಿದೆ. ಸರ್ಕಾರ ಕಣ್ಣು ತೆರೆದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ?: ವಿಜಯಪುರ | ಅಕ್ಕಮಹಾದೇವಿ ವಿವಿಯಿಂದ ಮೂವರು ಮಹಿಳಾ ಮಣಿಗಳಿಗೆ ಗೌರವ ಡಾಕ್ಟರೇಟ್
ಸತ್ಯಾಗ್ರಹದಲ್ಲಿ ಅಖಿಲ ಭಾರತ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದ ಕಾರ್ಯದರ್ಶಿ ಮಹಾದೇವ ಹಾಲಳ್ಳಿ, ಉಪಾಧ್ಯಕ್ಷ ಚಂದ್ರಶೇಖರ ಘಂಟೆಪ್ಪಗೋಳ, ಪುರಾಣಿಕ, ವಿ ರ್ಕುಲಕರ್ಣಿ ಹಾಗೂ ಎಲ್ಲಾ ಬ್ಯಾಂಕುಗಳ ನಿವೃತ್ತ ನೌಕರ ನೇತಾರರು ಭಾಗವಹಿಸಿದ್ದರು.
