ವಿಜಯಪುರ | ನಿವೃತ್ತ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಗೆ ಆಗ್ರಹ

Date:

ಕಳೆದ 30 ವರ್ಷಗಳಿಂದ ನಿವೃತ್ತ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆಯಾಗಿಲ್ಲ. ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಬೇಡಿಕೆಯಿಟ್ಟರೂ ಸ್ಪಂದನೆ ಸಿಗುತ್ತಿಲ್ಲ. ಕೂಡಲೇ ಪಿಂಚಣಿ ಪರಿಷ್ಕರಿಸಿ, ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿಜಯಪುರ ಜಿಲ್ಲ ಘಟಕ ಅಖಿಲ ಭಾರತ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದರು.

- Advertisement -

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ನಾಯಕ ಮಾತನಾಡಿ, “ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಇರುವಂತೆ ದೇಶದ ಎಲ್ಲ ಬ್ಯಾಂಕ್ ನಿವೃತ್ತ ಸಿಬ್ಬಂದಿಗಳಿಗೂ ಸೌಲಭ್ಯ ನೀಡಬೇಕು” ಎಂದು ಆಗ್ರಹಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಒಕ್ಕೂಟದ ಜಂಟಿ ಕಾರ್ಯದರ್ಶಿ ಎಂ ಎಸ್ ಭಟ್ ಮಾತನಾಡಿ, “ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಜೀವನದ ಇಳಿ ವಯಸ್ಸಿನಲ್ಲಿ ಹೋರಾಟ ಮಾಡಬೇಕಾಗಿ ಬಂದದ್ದು ಖೇದಕರ. ಎಲ್ಲ ರಾಜ್ಯಗಳಲ್ಲೂ ಎಲ್ಲ ಜಿಲ್ಲೆಗಳಲ್ಲೂ ಈ ಹೋರಾಟ ವ್ಯಾಪಿಸುತ್ತಿದೆ. ಸರ್ಕಾರ ಕಣ್ಣು ತೆರೆದು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಅಕ್ಕಮಹಾದೇವಿ ವಿವಿಯಿಂದ ಮೂವರು ಮಹಿಳಾ ಮಣಿಗಳಿಗೆ ಗೌರವ ಡಾಕ್ಟರೇಟ್

ಸತ್ಯಾಗ್ರಹದಲ್ಲಿ ಅಖಿಲ ಭಾರತ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದ ಕಾರ್ಯದರ್ಶಿ ಮಹಾದೇವ ಹಾಲಳ್ಳಿ, ಉಪಾಧ್ಯಕ್ಷ ಚಂದ್ರಶೇಖರ ಘಂಟೆಪ್ಪಗೋಳ, ಪುರಾಣಿಕ, ವಿ ರ್ಕುಲಕರ್ಣಿ ಹಾಗೂ ಎಲ್ಲಾ ಬ್ಯಾಂಕುಗಳ ನಿವೃತ್ತ ನೌಕರ ನೇತಾರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...