ವಿಜಯಪುರ | ಸಾಂವಿಧಾನಿಕ ಆಶಯದಂತೆ ಪಂಚಾಯತ್ ಚುನಾವಣೆ ನಡೆಸಲು ಆಗ್ರಹ

Date:

ಸಂವಿಧಾನದ 73ನೇ ತಿದ್ದುಪಡಿ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಆಶಯದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಬೇಕು. ಜೊತೆಗೆ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಿ ಸ್ಥಳೀಯ ಸ್ವರಾಜ್ಯ ವ್ಯವಸ್ಥೆಯನ್ನು ಬಲಪಡಿಸುವಂತೆ ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆ ಒತ್ತಾಯಿಸಿದೆ.

- Advertisement -

ಈ ಕುರಿತು ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ, ಭಾರತದ ಸಂವಿಧಾನದ 73ನೇ ತಿದ್ದುಪಡಿ ಕಾಯ್ದೆಯ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಾಂವಿಧಾನಿಕ ಸ್ಥಾನಮಾನ ನೀಡಲಾಗಿದೆ. ಸಂವಿಧಾನದ ಅನುಚ್ಛೇದ 243ರಿಂದ 243ರವರೆಗೆ ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ರಚನೆ, ಅಧಿಕಾರ, ಚುನಾವಣೆ ಹಾಗೂ ಕಾರ್ಯನಿರ್ವಹಣೆಗೆ ಸ್ಪಷ್ಟ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂವಿಧಾನದ ಅನುಚ್ಛೇದ 243E ಪ್ರಕಾರ ಪಂಚಾಯಿತಿಗಳ ಅವಧಿ ಐದು ವರ್ಷಗಳಾಗಿದ್ದು, ಅವಧಿ ಪೂರ್ಣಗೊಂಡ ಬಳಿಕ ಅಥವಾ ವಿಸರ್ಜನೆಯಾದಲ್ಲಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವುದು ಸಂವಿಧಾನದ ಆಶಯವಾಗಿದೆ. ಆದರೆ ರಾಜ್ಯದಲ್ಲಿ ಪಂಚಾಯತ್ ಚುನಾವಣೆಗಳು ವಿಳಂಬವಾಗುತ್ತಿರುವುದು ಸ್ಥಳೀಯ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ತರುತ್ತಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕಾರ ಗ್ರಾಮ ಸಭೆಗೆ ಮಹತ್ವದ ಸ್ಥಾನವಿದ್ದು, ಜನರ ನೇರ ಭಾಗವಹಿಸುವಿಕೆಯ ಮೂಲಕ ಗ್ರಾಮ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ ಉದ್ದೇಶ ಹೊಂದಿದೆ. ಆದ್ದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಡಳಿತಾಧಿಕಾರಿಗಳಿಗೆ ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಸರ್ಕಾರ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಗ್ರಾಮ ಸಭೆಯ ನಿರ್ಣಯಗಳ ಆಧಾರದ ಮೇಲೆ ಗ್ರಾಮ ಅಭಿವೃದ್ಧಿ ಕ್ರಿಯಾ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂವಿಧಾನ ಮತ್ತು ಕಾನೂನಿನ ಪ್ರಕಾರ ನೀಡಿರುವ ಅಧಿಕಾರಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸ್ಥಳೀಯ ಸ್ವರಾಜ್ಯವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಆಗ್ರಹಿಸಲಾಗಿದೆ.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ, ಡಾ. ಬಿ ಆರ್ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಆಶಯ ಹಾಗೂ ಬಸವಣ್ಣನವರ ಸಮಾನತೆ ಮತ್ತು ಜನ ಭಾಗವಹಿಸುವಿಕೆಯ ತತ್ವಗಳಿಗೆ ಅನುಗುಣವಾಗಿ ಸರ್ಕಾರ ತ್ವರಿತ ಕ್ರಮ ಕೈಗೊಂಡು ಸ್ಥಳೀಯ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕು ಎಂದು ಗ್ರಾಮ ಸ್ವರಾಜ್ ಕರ್ನಾಟಕ ವೇದಿಕೆಯ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಚ. ಪಾಟೀಲ್ ನಾಗರದಿನ್ನಿ ಮನವಿಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...