ವಿಜಯಪುರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮೂಲ ಸೌಕರ್ಯ ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಒತ್ತಾಹಿಸಿದ್ದಾರೆ.
ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
“ವಿಜಯಪುರ ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಮರಳುಗಾರಿಕೆ ಗಣಿಗಾರಿಕೆ ನಡೆಯುತ್ತಿದೆ. ಆದರೆ, ಜಿಲ್ಲೆಯಲ್ಲಿ ನಾಮಕವಸ್ಥೆ ಇಲಾಖೆಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಇಲಾಖೆಯ ಕಚೇರಿಯಲ್ಲಿಸಿಬ್ಬಂದಿಗಳ ಕೊರತೆ, ವಾಹನಗಳ ಕೊರತೆಯಿದೆ. ಅಲ್ಲದೆ, ವ್ಯಾಪಕ ಭ್ರಷ್ಟಾಚಾರವೂ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.
“ಜಿಲ್ಲೆಯಲ್ಲಿ ಅತಿಯಾದ ಮರಳುಗಾರಿಕೆ, ಜಲ್ಲಿಗಾರಿಕೆ, ಗಣಿಗಾರಿಕೆ ವ್ಯಾಪಕವಾಗಿ ನಡೆದು ಸರ್ಕಾರದ ಬೊಕ್ಕಸಕ್ಕೆ ಅಪಾರ ಪ್ರಮಾಣದ ನಷ್ಟವಾಗುತ್ತಿದೆ. ಹೀಗಾಗಿ, ತಕ್ಷಣವೇ ಕ್ರಮ ಕೈಗೊಂಡು ಸಿಬ್ಬಂದಿಗಳ ನೇಮಕಾತಿ ಮಾಡಬೇಕು. ಸೂಕ್ತ ವಾಹನಗಳನ್ನು ಒದಗಿಸಬೇಕು. ಭ್ರಷ್ಟಾಚಾರ ಮುಕ್ತ ಸೇವೆಯನ್ನು ನೀಡುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸೂಚನೆ ನೀಡಬೇಕು”ಎಂದು ಒತ್ತಾಯಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸುವ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಳ್ಳಿ, ರಾಕೇಶ್ ಇಂಗಳಗಿ, ಹಮೀದ್ ಇನಾಮುದಾರ್, ಪ್ರವೀಣ್ ಕನಸಿ, ವಿಕ್ರಂ ವಾಗ್ಮೊರೆ, ಶ್ರೀಶೈಲ್ ಮಠ ಇನ್ನಿತರರು ಇದ್ದರು.