ವಿಜಯಪುರ | ಆಲಮಟ್ಟಿ ಜಲಾಶಯ ಮಟ್ಟ 524.256 ಮೀಟರ್‌ ಏರಿಸಲು ಆಗ್ರಹ

Date:

ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ನೇತೃತ್ವದ ಎರಡನೇ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನಂತೆ 524.256 ಮೀಟರ್‌ಗೆ ಹೆಚ್ಚಿಸಿ, ಗೇಟ್‌ಗಳನ್ನು ಅಳವಡಿಸಲು ಅಗತ್ಯ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಯಿತು.

- Advertisement -

ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್‌ ಸಭಾಭವನದಲ್ಲಿ ರೈತಪರ, ದಲಿತಪರ ಹಾಗೂ ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ, ಮುಂದಿನ ಹೋರಾಟಕ್ಕಾಗಿ ಕೃಷ್ಣ ಕೊಳ್ಳ ಜಲ ರಕ್ಷಣಾ ಹೋರಾಟ ಸಮಿತಿ ರಚಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸಭೆಯ ನಂತರ ಸಂಸದ ರಮೇಶ ಜಿಗಜಿಣಗಿ ಅವರ ಕಚೇರಿಗೆ ತೆರಳಿ, ಪ್ರಧಾನಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗಲು ಕೇಂದ್ರ ಸಚಿವ ಜೋಶಿಯವರನ್ನು ಭೇಟಿಯಾಗಿ ದಿನಾಂಕ ನಿಗದಿ ಪಡಿಸಲು ಸಮಿತಿ ಮುಖಂಡರು ಮನವಿ ಮಾಡಿಕೊಂಡರು.

ಮನವಿಗೆ ಸ್ಪಂದಿಸಿದ ಸಂಸದ ರಮೇಶ ಜಿಗಜಣಗಿ, “ನೀರಾವರಿ ವಿಷಯದಲ್ಲಿ ಯಾವುದೇ ಪಕ್ಷ ರಾಜಕಾರಣ ಬೇಡ. ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ ಸೇರದಂತೆ ಇನ್ನುಳಿದ ಸಂಸದರನ್ನು ಕರೆದುಕೊಂಡು ಪ್ರಹಲ್ಲಾದ ಜೋಶಿ ಭೇಟಿ ನಂತರ ದಿನಾಂಕ ನಿಗದಿ ಮಾಡಲಾಗುತ್ತದೆ” ಎಂದು ಹೇಳಿದರು.

ನೀರಾವರಿ ತಜ್ಞ ಡಾ. ರಾಜೇಂದ್ರ ಪೊದ್ದರ ಮಾತನಾಡಿ, “ಅವಳಿ ಜಿಲ್ಲೆಯ ರೈತರ ಜಮೀನುಗಳಿಗೆ ಸಮಗ್ರ ನೀರಾವರಿ ಆಗಲು 524.25ಕ್ಕೆ ನೀರು ನಿಲ್ಲಿಸಬೇಕೆಂದರೆ ಮೊದಲು ಕೇಂದ್ರ ಸರ್ಕಾರ ಅಧಿ ಸೂಚನೆ ಹೊರಡಿಸಬೇಕು. ತದನಂತರ ಮೂರನೇ ಹಂತದ ಯೋಜನೆಗೆ ತಗಲುವ ಹಣವನ್ನು ರಾಜ್ಯ ಸರ್ಕಾರ ಬರಿಸಬೇಕು” ಎಂದರು.

ಮಾಜಿ ಶಾಸಕ ಶ್ರೀಕಾಂತ ಕುಲಕರಣಿ ಮಾತನಾಡಿ, “ಉತ್ತರ ಕರ್ನಾಟಕ 14 ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು” ಎಂದಿದ್ದಾರೆ.

ಹೋರಾಟ ಸಮಿತಿಯ ಪ್ರಮುಖ ಅರವಿಂದ ಕುಲಕರಣಿ, ಬಿ ಭಗವಾನ್ ರೆಡ್ಡಿ, ನಿವೃತ್ತ ನ್ಯಾಯಾಧೀಶ ಬಿ ಸಿ ಬಿರಾದಾರ, ಸುರೇಶ್ ಬಿಜಾಪುರ್, ಚೆನ್ನು ಕಟ್ಟಿಮನಿ,ಪಂಚಪ್ಪ ಕಲಬುರಗಿ, ವಿ ಎಸ್ ಪಾಟೀಲ, ಮಲ್ಲಿಕಾರ್ಜುನ ಯಂಡಗೆರಿ, ಭರತ್ ಎಚ್ ಟಿ, ಭೀಮಶಿ ಕೊಕೆರೆ, ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎಂ ಎನ್ ಬಿರಾದಾರ, ಅಣ್ಣಾರಾಯ ಇಳಗೆರಾ, ಮಲ್ಲಿಕಾರ್ಜುನ ಎಚ್ ಟಿ, ಉಮೇಶ ವಾಲಿಕಾರ, ರಾಮನಗೌಡ ಬಿರಾದಾರ, ಲಕ್ಷ್ಮಣ ಹಂದ್ರಾಳ, ಮಲ್ಲನಗೌಡ ಡೋಮನಾಳ, ಗುರುನಾಥ ಬಗಲಿ, ಭೋಗೇಶ ಸೊಲ್ಲಾಪುರ, ಅಬ್ದುಲ್ ಖಧಿರ್, ಮಲ್ಲಿಕಾರ್ಜುನ ಬಟಗಿ, ಲಲಿತಾ ಬಿಜ್ಜರಗಿ, ನೀಲಾಂಬಿಕೆ ಬಿರಾದಾರ, ಭೀಮರಾಯ ಪೂಜಾರಿ, ಶೆಟ್ಟಪ್ಪ ಲಮಾಣಿ, ಗುರುಲಿಂಗಪ್ಪ ಪಡಸಲಗಿ, ಹೊನಕೆರೆಪ್ಪ ತೆಲಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...