ವಿಜಯಪುರ | ಎಸ್‌ಸಿ/ಎಸ್‌ಟಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಲು ಆಗ್ರಹ

Date:

ವಿಜಯಪುರ ನಗರದಲ್ಲಿರುವ ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕರ ವಸತಿ ನಿಲಯದ ಅವ್ಯವಸ್ಥೆಯನ್ನು ಸರಿಪಡಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಮಾಜ ಕಲ್ಯಾಣ ತಾಲೂಕು ಅಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.

- Advertisement -

ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡ ಸದಾಶಿವ ಬಬಲೇಶ್ವರ, “ಅಲ್ ಅಮೀನ್‌ನಲ್ಲಿರುವ ವಸತಿ ನಿಲಯ ಕೇವಲ 100 ಮಂದಿ ವಿದ್ಯಾರ್ಥಿಗಳು ತಂಗುವಷ್ಟು ಸಾಮರ್ಥ್ಯವಿದೆ. ಆದರೆ, 200 ಮಂದಿಗೂ ಹೆಚ್ಚಿನ ವಿದ್ಯಾರ್ಥಿಗಳನ್ನು ತುಂಬಿಸಲಾಗಿದೆ. ಅದರಿಂದ ವಸತ ನಿಲಯದ ವಿದ್ಯಾರ್ಥಿಗಳಿಗೆ ಜಾಗ ಇಲ್ಲದೆ ಕಾರಿಡಾರ್‌ನಲ್ಲಿ ಮಲಗುವ ಪರಿಸ್ಥಿತಿ ನಿರಮ್ಆಣವಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಾಮರ್ಥ್ಯಕ್ಕೂ ಮೀರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸಿಗದಂತಾಗಿವೆ. ಗ್ರಂಥಾಲಯವಿದ್ದರೂ ವಿದ್ಯಾರ್ಥಿಗಳಿಗೆ ಓದುವ ಪುಸ್ತಕಗಳಿಲ್ಲ. ಗುಣಮಟ್ಟದ ಊಟ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪರಿಣಾಮ, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಲ್ಲದೆ, ಹಾಸ್ಟೆಲ್‌ನಲ್ಲಿ 75% ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಆದರೆ, ಇತರ ಸಮುದಾಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರವೇಶ ನೀಡಲಾಗಿದೆ” ಎಂದು ದೂರಿದ್ದಾರೆ.

“ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಅಧಿಕಾರಿಗಳ ಬೇಜವಾಬ್ದಾರಿಯಿಂದ ಸಾಂವಿಧಾನಿಕ ನ್ಯಾಯ ಸಿಗದೆ ಕಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಮೇಲಧಿಕಾರಿಗಳು ಗಮನವಹಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವ ವೇಳೆ ಬಸವರಾಜ ಮಾದರ್, ಪ್ರಲ್ಹಾದ, ಸುರೇಶ್, ಜಗ್ಗು ಮುಂತಾದವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...