ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳು ಮತ್ತು ಮೌಲ್ಯಗಳ ಜ್ಞಾನದ ಅವಶ್ಯಕತೆಯಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಸವರಾಜ ಬೆಣ್ಣೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಾಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗ ಮತ್ತು ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ” ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಮಾತನಾಡಿ, “ಕೌಶ್ಯಲ್ಯ ಅಭಿವೃದ್ಧಿಯ ಮಹತ್ವ, ಇದರ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ರೂಢಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.
ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಎಚ್ ಎಂ ಚಂದ್ರಶೇಖರ ಮಾತನಾಡಿ, “ವಿದ್ಯಾರ್ಥಿನಿಯರ ಭವಿಷ್ಯದ ಪ್ರಗತಿಯಲ್ಲಿ ಕೌಶ್ಯಲ್ಯ ಬಹಳ ಮುಖ್ಯ” ಎಂದು ತಿಳಿಸಿದರು.
ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಹಾಗೂ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಆರ್ ವಿ ಗಂಗಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮಹಿಳಾ ವಿವಿಯ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಮಲ್ಲಿಕಾರ್ಜುನ ಎನ್ ಎಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಪಟ್ಟಣ ಪಂಚಾಯಿತಿ ಸದಸ್ಯರ ಸಾಮಾನ್ಯ ಸಭೆ; ಶಾಸಕರೆದುರು ಮನವಿ ಇಟ್ಟ ಸದಸ್ಯರು
ಪ್ರಾದೇಶಿಕ ಕೇಂದ್ರ ಬೀದರ್‌ನ ನಿರ್ದೇಶಕ ಪ್ರೊ. ಡಿ ಎಂ ಮದಕರಿ, ಸಹಾಯಕ ಪ್ರಾಧ್ಯಾಪಕ ಡಾ.ಸುರೇಶ ಕೆ ಪಿ, ವಿಭಾಗದ ಪ್ರಾಧ್ಯಾಪಕಿ ಪ್ರೊ.ಅನಿತಾ ನಾಟಿಕರ್, ಡಾ.ಸಿ ಎಂ ಮಠಪತಿ, ಡಾ. ಗಣೇಶ ಎಸ್ ಆರ್, ವಿವಿಧ ವಿಭಾಗದ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು.