ವಿಜಯಪುರ | ಪೋಡಿ ಮುಕ್ತ ಗ್ರಾಮಗಳಿಗೆ ಅಧಿಕಾರಿಗಳ ನೇರ ಚಟುವಟಿಕೆ ಅಗತ್ಯ: ಸಚಿವ ಕೃಷ್ಣಬೈರೇಗೌಡ

Date:

ಸರ್ಕಾರದಿಂದ ಪೋಡಿ ಮುಕ್ತ ಗ್ರಾಮ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರೇ ಬಂದು ಅರ್ಜಿ ಸಲ್ಲಿಸುವ ತನಕ ಕಾಯಬೇಡಿ, ಅಧಿಕಾರಿಗಳೇ ಗ್ರಾಮಗಳಿಗೆ ಭೇಟಿ ನೀಡಿ  ಪೋಡಿ ಕಾರ್ಯ ಕೈಗೊಳ್ಳಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಪೋಡಿಗೆ ಬಾಕಿ ಇರುವ ಜಮೀನುಗಳ ಪರಿಶೀಲನೆ ನಡೆಸಬೇಕು. ಈ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಬೇಕು. ಒಂದೇ ಆರ್‌ಟಿಸಿಯಲ್ಲಿ ಹಲವರ ಹೆಸಋು ನಮೂದಾಗಿರುವುದರ ಕುರಿತು ಸರ್ವೆ ನಡೆಸಿ, ನಕ್ಷತ್ರ ತಯಾರಿಸಿ ಪ್ರತ್ಯೇಕವಾಗಿ ಆಯಾ ಜಮೀನಿನ ಮಾಲಿಕರ ಹೆಸರಿಗೆ ಆರ್‌ಟಿಸಿ ಒದಗಿಸಲು ಕ್ರಮ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಭೂ ಸುರಕ್ಷಾ ಯೋಜನೆಯಡಿ ಕಂದಾಯ ಇಲಾಖೆಯಲ್ಲಿನ ಮೂಲ ಹಳೆಯ ದಾಖಲೆಗಳ ಗಣಕೀಕರಣ ನಡೆಯುತ್ತಿದೆ. ರಾಜ್ಯಾದ್ಯಂತ ಅಂದಾಜು 20 ಕೋಟಿ ಪುಟಗಳ ದಾಖಲೆಗಳ ಗಣಕೀಕರಣ ಕಾರ್ಯ ಆಗಿದೆ. ಬಾಕಿ ಇರುವ ದಾಖಲೆಗಳ ಗಣಕೀಕರಣವನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳೆಯ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ  ತ್ವರಿತ ಗತಿ ನೀಡಬೇಕು” ಎಂದು ಸೂಚಿಸಿದರು.

ಇದನ್ನೂ ಓದಿ: ವಿಜಯಪುರ | ಪ್ರತಿಷ್ಠಿತ ವಲಯಗಳ ಹಿಂದೆ ಕಾರ್ಮಿಕರ ಶ್ರಮ, ತ್ಯಾಗವಿದೆ: ಮಲ್ಲಿಕಾರ್ಜುನ ಎಚ್ ಟಿ

ಸಭೆಯಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ನಾಗಠಾಣ ಶಾಸಕ ವಿಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ ಭೂಬಾಲನ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೋರ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ತಹಶೀಲ್ದಾರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...