ವಿಜಯಪುರ | ಮಾ.31ರಂದು ʼಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರʼ ಕುರಿತು ಚರ್ಚೆ

Date:

Advertisements

ವಿಜಯಪುರದ 13ನೇ ಸಾಂಸ್ಕೃತಿಕ ಜನೋತ್ಸವ’ದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 11ಕ್ಕೆ ‘ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ’ ಎಂಬ ವಿಷಯದ ಕುರಿತು ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವಜನರೊಂದಿಗೆ ಚರ್ಚೆ ಕಾರ್ಯಕ್ರಮವನ್ನು ಲೇಖಕಿ ರೂಪ ಹಾಸನರವರು ನಡೆಸಿಕೊಡುವರು ಎಂದು ಎಐಡಿಎಸ್‌ಒ ತಿಳಿಸಿದೆ.

ಎಐಡಿಎಸ್‌ಒ ಜಿಲ್ಲಾ ಸಂಚಾಲಕರು ಪತ್ರಿಕಾ ಪ್ರಕಟಣೆ ನೀಡಿದ್ದು, “ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಸುರೇಖಾ ಕಡಪಟ್ಟಿ ಪ್ರಾಸ್ತಾವಿಕವಾಗಿ ಮಾತನಾಡುವರು. ಎಐಎಂಎಸ್‌ಎಸ್‌ನ ಜಿಲ್ಲಾ ಸಹ ಸಂಚಾಲಕಿ ಗೀತಾ ಎಚ್ ಅಧ್ಯಕ್ಷತೆ ವಹಿಸುವರು” ಎಂದು ತಿಳಿಸಿದ್ದಾರೆ.

ಸಿನಿಮಾ ಪ್ರದರ್ಶನ ಮತ್ತು ಸಂವಾದ : ಭಾನುವಾರ ಸಂಜೆ 5-30ಕ್ಕೆ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಸಿನೆಮಾ ‘ಡೇರ್ ಡೆವಿಲ್ ಮುಸ್ತಫಾ’ದ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಿನೆಮಾವನ್ನು ಶಶಾಂಕ ಸೋಗಲ್ ಅವರು ನಿರ್ದೇಶಿಸಿದ್ದು, 100 ಮಂದಿ ತೇಜಸ್ವಿಯವರ ಅಭಿಮಾನಿಗಳು ಸೇರಿ ನಿರ್ಮಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ನಾಲ್ಕೈದು ಮಂದಿ ಬಂದು ನನ್ನಿಂದ ಒತ್ತಾಯವಾಗಿ ಸಹಿ ಹಾಕಿಸಿಕೊಂಡರು: ಮಲ್ಲಿಕಾರ್ಜುನ ಸ್ವಾಮೀಜಿ

ಸಿನಿಮಾ ಪ್ರದರ್ಶನದ ನಂತರ ನಿರ್ದೇಶಕ ಶಶಾಂಕ ಸೋಗಲ್ ಅವರು ಸಿನಿಮಾ ಕುರಿತು ಸಂವಾದವನ್ನು ನಡೆಸಿಕೊಡುವರು. ನಾಯಕ ನಟರಾದ (ಸಿನೆಮಾ ಹೀರೋ) ಶಿಶಿರ ಬೈಕಾಡಿಯವರೂ ಉಪಸ್ಥಿತರಿರುವರು. ಎಐಡಿಎಸ್‌ಒನ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತರವರು ಪ್ರಾಸ್ತಾವಿಕವಾಗಿ ಮಾತನಾಡುವರು. ಎಐಎಂಎಸ್‌ಎಸ್‌ನ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡಗೂಳಿಯವರು ಅಧ್ಯಕ್ಷತೆ ವಹಿಸುವರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X