ವಿಜಯಪುರ | ಪಾರದರ್ಶಕತೆಯಿಂದ ಪರೀಕ್ಷೆಗಳನ್ನು ನಡೆಯುವಂತೆ ಜಿಲ್ಲಾ ಸಿಇಓ ರಿಷಿ ಆನಂದ ಸೂಚನೆ

Date:

Advertisements

2024-2025ನೇ ಸಾಲಿನ ಎಸ್ಎಸ್ಎಲ್‌ಸಿ-2ರ ಪರೀಕ್ಷೆ ನಡೆದಿರುವ ನಿಮಿತ್ಯ ವಿಜಯಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಜಿಲ್ಲಾ ಪಂಚಾಯಿತ್ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರೀಕ್ಷೆಗಳಲ್ಲಿ ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕ ಯಂತ್ರಗಳು, ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿ, ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಮಾಡಬೇಕು. ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೆ ಈಡಾಗದಂತೆ ಸುಸೂತ್ರವಾಗಿ ನಡೆಸಬೇಕು.

ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಮತ್ತು ಶಿಸ್ತಿನಿಂದ ನಡೆಸುವುದು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಯುವಪೀಳಿಗೆ ಮೊಬೈಲ್ ಪ್ರಪಂಚದಲ್ಲಿ ಸಾಮಾಜಿಕ ಜವಾಬ್ದಾರಿ ಮರೆಯುತ್ತಿದೆ: ಶಿವಪ್ರಸಾದ್

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯ ಅಧಿಕಾರಿ ಎಮ್. ಎ. ಗಳೆದಗುಡ್ಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ರೇಣುಕಾ ಕಲಬುರ್ಗಿ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿ ಎಮ್. ಎಸ್. ಬ್ಯಾಹಟ್ಟಿ, ಎಪಿಸಿ ಆರ್. ಬಿ. ಪಾಟೀಲ, ಉಪನ್ಯಾಸಕ ನಾರಾಯಣ ಬಾಬಾನಗರ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X