“ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಹೇಳಿದರು.
ವಿಜಯಪುರ ಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವವರು. ಶಿಸ್ತಿನ ಪಥ ಸಂಚಲನ, ಗೌರವ ವಂದನೆ, ಶಾಲಾ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು” ಎಂದು ಸೂಚಿಸಿದರು.
“ಪ್ಲಾಸ್ಟಿಕ್ ಧ್ವಜ ಬಳಸದಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಕಚೇರಿಗಳಲ್ಲಿ ಅಂದು ರಾಷ್ಟ್ರಧ್ವಜಾರೋಹಣ ನೆರವೇರಿಸುವಂತೆಯೂ ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು” ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಸ್ವಾತಂತ್ರ ಮುನ್ನ ದಿನ ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸಿವಂತಾಗಬೇಕು. ಎಲ್ಲಾ ಕಚೇರಿಗಳಲ್ಲಿ ಅಂದು ರಾಷ್ಟ ಧ್ವಜಾರೋಹಣ ನೆರೆವೆರಿಸುವಂತೆಯೋ ಧ್ವಜ ಸಂಹಿತೆ ಅನುಸರವಾಗಿ ಧ್ವಜಾರೋಹಣ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಸ್ವಾತಂತ್ರ ದ ಮುನ್ನಾದಿನ ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲಾ ಕಚೇರಿಗಳಲ್ಲಿ ಶ್ರಮದಾನ ಮಾಡುವ ಮೂಲಕ ಕಚೇರಿ ಆವರಣವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಅವಳಿ ನಗರಕ್ಕೆ ಸಮರ್ಪಕ ನೀರಿನ ಪೂರೈಕೆಗೆ ಆದ್ಯತೆ ಇರಲಿ : ಸಚಿವ ಎಚ್ ಕೆ ಪಾಟೀಲ
“ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಅಂದು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸಂಜೆ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಿರ್ವಹಿಸುವಂತೆ” ಜಿಲ್ಲಾಧಿಕಾರಿ ಸೂಚಿಸಿದರು.