ವಿಜಯಪುರ | ವಸತಿ ನಿಲಯದ ಅವ್ಯವಸ್ಥೆ; ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ

Date:

ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ಅವ್ಯವಸ್ಥೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

- Advertisement -

ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ  ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ ಅಜಮನಿ, ‘ವಿಜಯಪುರ ನಗರದಲ್ಲಿರುವ ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ಅಧೀನದಲ್ಲಿರುವ, ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನೀಲಯದ ಸಿಬ್ಬಂದಿ ಮತ್ತು ಅಧಿಕಾರಿಗಳ ನಿರ್ಲಕ್ಷ ಮತ್ತು ದುರ್ನಡತೆ ತೋರಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

‘ಒಂದು ವಾರ ವಿದ್ಯಾರ್ಥಿಗಳಿಗೆ ಅಡುಗೆ ಮಾಡದೇ ಉಪವಾಸ ಇರುವ ಹಾಗೆ ಮಾಡಿದ್ದಾರೆ. ಮೊದಲೂ ಅದೇ ವಸತಿ ನಿಲಯದಲ್ಲಿ ಇದ್ದ ಹುಲಗಪ್ಪ ಛಲವಾದಿ ಎಂಬ ಹೊರಗುತ್ತಿಗೆ ನೌಕರನನ್ನು ಹಲವು ಆರೋಪಗಳ ಮೇಲೆ ಬೇರೆ ವಸತಿ ನಿಲಯಕ್ಕೆ ವರ್ಗಾವಣೆ  ಮಾಡಲಾಗಿತ್ತು. ಆದ್ದರಿಂದ ಅವರು ದುರುದ್ದೇಶ ಇಟ್ಟುಕೊಂಡು ವಸತಿ ನಿಲಯಕ್ಕೆ ನುಗ್ಗಿ ಅಡುಗೆ ಮಾಡುತ್ತಿರುವ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಬೆದರಿಸಿ ನಿಲಯದಿಂದ ಅಡುಗೆ ಮಾಡುವವರನ್ನು ಕರೆದುಕೊಂಡು ಹೋಗಿ, ವಿದ್ಯಾರ್ಥಿಗಳಿಗೆ ಊಟ ಇಲ್ಲದ ಹಾಗೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಪಂದನೆ ನೀಡದೆ, ಯಾವುದೇ ಪರಿಶೋಧನೆ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ. ಈ ಘಟನೆಗೆ ಕಾರಣರಾದ ಹುಲಗಪ್ಪ ಛಲವಾದಿ, ಲಕ್ಷ್ಮೀ ಛಲವಾದಿ, ಯಲ್ಲಮ್ಮ, ಜುಲೇಖಾ ಎಂಬ ಮೂರು ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿರ್ವಹಿಸದೆ, ಪದೆ ಪದೆ ವಿದ್ಯಾರ್ಥಿಗಳಿಗೆ  ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದಾರೆ. ಇವರನ್ನು ಕೆಲಸದಿಂದ ವಜಾ ಮಾಡಿ ಬೇರೆ ಸಿಬ್ಬಂದಿಯನ್ನು ಅಯ್ಕೆ ಮಾಡಿ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಿ. ಹಾಗೆಯೇ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನ ಈಡೇರಿಸಬೇಕು’ ಎಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ ಸಲ್ಲಿಸಿದೆ.

ಈ ಸಂದರ್ಭದಲ್ಲಿ  ಸಯ್ಯದ್ ಸುಬೇದಾರ್, ದೀಪಕ್, ಸತೀಶ್ ಇಮ್ಮನದ, ಮುತ್ತು ಛಲವಾದಿ, ಸಲೀಂ ಅಹ್ಮದ್, ಸತೀಶ್ ಅಂಜುಟಗಿ ಮತ್ತು ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...