ವಿಜಯಪುರ | ಅಕ್ರಮ ಶುಲ್ಕ, ಮೂಲಸೌಕರ್ಯ ಕೊರತೆ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಹೋರಾಟ

Date:

ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಸಭೆಯಲ್ಲಿ ಪ್ರಶಿಕ್ಷಣಾರ್ಥಿಗಳು ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

- Advertisement -

“ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಅಗತ್ಯವಾದ ಪ್ರಾಯೋಗಿಕ ತರಬೇತಿ ದೊರೆಯುತ್ತಿಲ್ಲ. ಜೊತೆಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಸುಮಾರು ಎರಡುವರೆ ಲಕ್ಷ ರೂಪಾಯಿವರೆಗೆ ನಿಯಮಬಾಹಿರವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇಂದಿನ ಅಗತ್ಯಗಳಿಗೆ ಅನುಗುಣವಾಗಿ ಎನ್‌ಇಪಿ (NEP) ಪಠ್ಯಕ್ರಮವನ್ನು ಸಮರ್ಪಕವಾಗಿ ಅಳವಡಿಸಿಲ್ಲ. ತರಬೇತಿ ಸಂಸ್ಥೆಗಳಲ್ಲಿ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಬೋರ್ಡ್ ಹಾಗೂ ಸುಸಜ್ಜಿತ ಗ್ರಂಥಾಲಯಗಳಂತಹ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬರುತ್ತಿದೆ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಪ್ರಶಿಕ್ಷಣಾರ್ಥಿಗಳೊಂದಿಗೆ, ವಿಶೇಷವಾಗಿ ಮಹಿಳಾ ಪ್ರಶಿಕ್ಷಣಾರ್ಥಿಗಳೊಂದಿಗೆ ಏಕವಚನದಲ್ಲಿ ಹಾಗೂ ಅಸಭ್ಯ ಪದಗಳಿಂದ ವರ್ತಿಸಲಾಗುತ್ತಿರುವುದು ಖಂಡನೀಯವಾಗಿದೆ ಎಂದು ಸಭೆ ತಿಳಿಸಿತು. ಪರೀಕ್ಷೆಗಳು ಸಕಾಲಕ್ಕೆ ನಡೆಯದ ಕಾರಣ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿ ಸಿಲುಕಿದ್ದು, ವ್ಯವಸ್ಥಿತ ಮೆಂಟರ್‌ಶಿಪ್ ಕೊರತೆಯಿಂದಾಗಿ ಸೂಕ್ತ ಮಾರ್ಗದರ್ಶನದಿಂದ ವಂಚಿತರಾಗುತ್ತಿದ್ದಾರೆ” ಎಂದು ಗಮನ ಸೆಳೆಯಲಾಯಿತು.

“ಇದರ ಜೊತೆಗೆ ಆಂತರಿಕ ಅಂಕಗಳು ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಮೌಲ್ಯಮಾಪನದಲ್ಲಿ ವ್ಯಾಪಕ ಪಕ್ಷಪಾತ ನಡೆಯುತ್ತಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ” ಎಂದು ಪ್ರಶಿಕ್ಷಣಾರ್ಥಿಗಳು ಆರೋಪಿಸಿದರು.

ಪ್ರಶಿಕ್ಷಣಾರ್ಥಿಗಳ ಈ ಎಲ್ಲಾ ಗಂಭೀರ ಶೈಕ್ಷಣಿಕ ಸಮಸ್ಯೆಗಳನ್ನು ಖಂಡಿಸಿ ಹಾಗೂ ಶಾಶ್ವತ ಪರಿಹಾರಕ್ಕಾಗಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಮುಂಬರುವ ಜೂನ್ 9 ಮತ್ತು 10 ರಂದು ವಿಜಯಪುರದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಯಿತು.

ಜಿಲ್ಲೆಯ ಎಲ್ಲಾ ಪ್ರಶಿಕ್ಷಣಾರ್ಥಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಯುವ ಹೋರಾಟಗಾರರಾದ ಗೌಡಪ್ಪ ಗೌಡ ಬಿರಾದಾರ ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ, ಕಾರ್ಯದರ್ಶಿ ರಾಹುಲ್ ಕಳಸದ, ಮಂಜುನಾಥ್ ಕವಳಿ, ಆಕಾಶ್ ಕುರ್ನಿ, ಸಂದೇಶ್ ಕುಮುಟಗಿ, ಆದರ್ಶ್, ವಿಜಯ, ಅಜಯ, ಸಂದೀಪ್, ಅಭಿಷೇಕ್, ಮಹಿಳೆಯರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...