ವಿಜಯಪುರ | ನಿಗದಿತ ಅವಧಿಯೊಳಗೆ ಒಳಮೀಸಲಾತಿ ಸಮೀಕ್ಷೆ ಅಸಾಧ್ಯ; ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಡಿಎಸ್‌ಎಸ್ ಮುಖಂಡರ ಆಗ್ರಹ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮೇ 5ರಿಂದ ಆರಂಭಗೊಂಡಿರುವ ಒಳಮೀಸಲಾತಿ ಸಮೀಕ್ಷೆಯನ್ನು, ನಿಗದಿಯಾಗಿರುವ ಮೇ 17ರ ಅವಧಿಗೆ ಮುಗಿಸಲು ಸಮೀಕ್ಷೆದಾರರು ತಿಣುಕಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಡಿಎಸ್‌ಎಸ್ ಮುಖಂಡರಾದ ಗುಂಡಪ್ಪ ಛಲವಾದಿ, ಸಿದ್ದಣ್ಣ ಕಟ್ಟಿಮನಿ ಸಮಾಜ ಕಲ್ಯಾಣ ಅಧಿಕಾರಿ ಬಸಂತಿ ಮಠ ಅವರನ್ನು ಒತ್ತಾಯಿಸಿದರು.

- Advertisement -

ನಾಲತವಾಡದಲ್ಲಿ ಆರಂಭಗೊಂಡ ಒಳಮೀಸಲಾತಿ ಸಮೀಕ್ಷೆ ಪರಿಶೀಲನೆಗೆ ಆಗಮಿಸಿದ ವೇಳೆ ಅಧಿಕಾರಿ ಬಸಂತಿ ಅವರಿಗೆ ಮನವಿ ಮಾಡಿದ ಮುಖಂಡರು, “ನೀವು ನೀಡಿದ ಕಾಲಮಿತಿಯಲ್ಲಿ ಸಮೀಕ್ಷೆ ಮುಕ್ತಾಯಗೊಳಿಸುವುದು ಬಹುತೇಕ ಅನುಮಾನವಾಗಿದೆ. ಆದ್ದರಿಂದ ಹೆಚ್ಚಿನ ಸಿಬ್ಬಂದಿ ನೇಮಿಸಿ, ಇಲ್ಲ ಸಮೀಕ್ಷೆ ಅವಧಿ ವಿಸ್ತರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

“ಪ್ರತಿ ಕುಟುಂಬಕ್ಕೆ ದತ್ತಾಂಶ ಸಂಗ್ರಹಕ್ಕೆ ಕನಿಷ್ಠ ಅರ್ಧ ಗಂಟೆ ತೆಗೆದುಕೊಳ್ಳುತ್ತಿದೆ. ಪಟ್ಟಣದಲ್ಲಿ ಸಾವಿರಾರು ಕುಟುಂಬಗಳಿವೆ. ಹೀಗಾದ್ರೆ ಅವಧಿಯೊಳಗೆ ಸಮೀಕ್ಷೆ ಅಸಾಧ್ಯವಾಗುತ್ತದೆ. 101 ಉಪ ಜಾತಿಗಳು ಪರಿಶೀಲನೆ ಜತಗೆ ಕುಟುಂಬಸ್ಥರ ದತ್ತಾಂಶ ಸೇರ್ಪಡೆ ಸೂಕ್ತ ದಾಖಲೆ ಪಡೆಯಲು ಹಾಗೂ ಅವರ ಜಾತಿ ನಮೂದಿಸಲು ಸಿಬ್ಬಂದಿಗೆ ಸಮಯ ಬೇಕು. ಜತಗೆ ಸರ್ವರ್ ಸಮಸ್ಯೆಯೂ ಇದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಮರ ಕಡಿತ ಕಾರ್ಯಕ್ಕೆ ವಿರೋಧ; ನೆಲದಡಿ ವಿದ್ಯುತ್ ತಂತಿ ಅಳವಡಿಕೆಗೆ ಆಗ್ರಹ

ಹೋರಾಟಗಾರರು ನಾಲತವಾಡ ಭಾಗದಲ್ಲಿ “ಬೇಡ ಜಂಗಮ ಜಾತಿಗೆ ಸೇರಿದ ಯಾವುದೇ ಕುಟುಂಬಗಳಿಲ್ಲ. ಒಂದು ವೇಳೆ ತಾವು ಅವರ ಮಾತು ಕೇಳಿ ಕಾಲಂಗಳಲ್ಲಿ ಬೇಡ ಜಾತಿ ಜಂಗಮ ಎಂದು ಸೇರ್ಪಡೆ ಮಾಡಿದರೆ ನಿಮ್ಮ ಹಾಗೂ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಡಿಎಸ್‌ಎಸ್‌ ಮುಖಂಡರು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

“ಪಟ್ಟಣದಲ್ಲಿ ಹೆಚ್ಚಿನ ಸಂಬಂಧಿ ನೇಮಿಸಲು ಸ್ಥಳದಲ್ಲಿ ಆದೇಶ ಮಾಡಿದ್ದೇನೆ. ದತ್ತಾಂಶಗಳ ಸಂಗ್ರಹಕ್ಕೆ ತಾವು ಸಹಕರಿಸಬೇಕು. ಅವಧಿ ವಿಸ್ತರಣೆ ಕುರಿತು ಮೇಲಧಿಕಾರಿಗಳ ಮಟ್ಟದಲ್ಲಿದೆ. ಸಾಧ್ಯವಾದಷ್ಟು ಅವಧಿಯೊಳಗೇ ಮುಗಿಸುವ ಲಕ್ಷಣಗಳಿವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...