ದೇವರಹಿಪ್ಪರಗಿ ಸಮೀಪದ ಕೆರುಟಗಿ ಮೂಲಕ ತಿಳಗೂಳ ಗ್ರಾಮದ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿಜಯಪುರ ಜಿಲ್ಲೆ ಸಿಂದಗಿ ಘಟಕದ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
“ಕೆರುಟಗಿ ತಾಂಡಾದಿಂದ ವಿದ್ಯಾಭ್ಯಾಸಕ್ಕಾಗಿ ತಿಳಗೂಳ ಶಾಲೆಗೆ ನಿತ್ಯವೂ ಸುಮಾರು 40 ರಿಂದ 45 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೋಗುತ್ತಾರೆ. ವಿದ್ಯಾರ್ಥಿಗಳು ಪ್ರತಿದಿನ ಸುಮಾರು 5 ಕಿಮೀವರೆಗೆ ನಡೆದೇ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ. ಮಳೆಗಾಲದ ಸಮಯದಲ್ಲಿ ಶಾಲೆಗೆ ತೆರಳಲು ಅನೇಕ ತೊಂದರೆ ಅನುಭವಿಸುವಂತಾಗಿದ್ದು, ಕೂಡಲೇ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಿ ಆಸ್ಪತ್ರೆ ಹೊಸ ಕಟ್ಟಡಕ್ಕೆ ಗ್ರಹಣ; ಶಿಥಿಲಾವಸ್ಥೆಯ ಹಳೆ ಕಟ್ಟಡದಲ್ಲೇ ಚಿಕಿತ್ಸೆ
ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ್ ಪೂಜಾರಿ, ತಾಲೂಕು ಘಟಕದ ಅಧ್ಯಕ್ಷ ಕಾಶಿನಾಥ್, ಮುತ್ತು ಕಲಕೇರಿ ಇದ್ದರು.
