ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಸತಿನಿಲಯ ಮಂಜೂರಿಗೆ ಆಗ್ರಹ; ಸಿಇಒಗೆ ಡಿವಿಪಿ ಮನವಿ

Date:

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಸತಿನಿಲಯ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಜಯಪುರ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯ್ ಕುಮಾರ್‌ ಅಜಮನಿ ಮಾತನಾಡಿ,”ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ವಸತಿನಿಲಯ ಸ್ಥಾಪಿಸಬೇಕು. ಉನ್ನತ ವಿದ್ಯಾಭ್ಯಾಸಕ್ಕಾಗಿ ರಾಜ್ಯದ ಹಲವು ಭಾಗಗಳಿಂದ ವಿದ್ಯಾರ್ಥಿನಿಯರು ಆಗಮಿಸುತ್ತಿದ್ದಾರೆ. ಪ್ರಸ್ತುತ ವರ್ಷವೂ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಂಡಿದ್ದಾರೆ. ಆದರೆ, ವಿದ್ಯಾರ್ಥಿಗಳು ಉಳಿದುಕೊಳ್ಳಲು ವಸತಿನಿಲಯದಲ್ಲಿ ಅವಕಾಶ ಸಿಕ್ಕಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ಮಹಿಳಾ ವಿವಿ ಕ್ಯಾಂಪಸ್‌ನ ವಸತಿ ನಿಲಯಗಳಲ್ಲಿ ಸ್ಥಳಾವಕಾಶ ಇಲ್ಲದೆ ಹೊರಗೆ ಬಾಡಿಗೆ ರೂಮ್‌  ಮಾಡಿಕೊಂಡು ಓದುವಂತಹ ದುಃಸ್ಥಿತಿ ಎದುರಾಗಿದೆ. ಬಹುತೇಕ ಬಡ ಸಮುದಾಯಗಳ ವಿದ್ಯಾರ್ಥಿನಿಯರು ಮಹಿಳಾ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ದುಡಿಯದೇ ಬಾಡಿಗೆ ಕಟ್ಟಿಕೊಂಡು ಓದುವು ಕಷ್ಟದ ಸಂಗತಿ. ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ ಕ್ಲಾಸ್‌ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ. ಪ್ರತಿದಿನ ಕಾಲೇಜಿಗು ರೂಮಿಗು ಓಡಾಡುವುದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ” ಎಂದು ದೂರಿದರು.

“ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತದೃಷ್ಟಿಯಿಂದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರ ನೂತನವಾಗಿ ಮಂಜುರಾಗಿರುವ ವಸತಿ ನಿಲಯಗಳಲ್ಲಿ ಎರಡನ್ನೂ ವಿಶ್ವವಿದ್ಯಾಲಯ ಸ್ಥಾಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಮಾರ್ಪಾಡು ತನ್ನಿ; ಡಿಎಸ್‌ಎಸ್ ಒತ್ತಾಯ

ಮುಖಂಡರಾದ ಮಾದೇಶ್ ಚಲವಾದಿ, ಸತೀಶ್ ಅಂಜುಟಗಿ, ಯಾಶೀನ್ ಅನ್ವವಾರ, ಸಂಗೀತಾ ಕುಮಟಗಿ, ರವಿ ವಾಲಿಕಾರ, ಪ್ರವೀಣ ಬನಸೋಡೆ, ಮಾಂತೇಶ ಚಲವಾದಿ, ಯುವರಾಜ್ ಓಲೆಕಾರ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...