ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದಿರುವುದರಿಂದ ವಿದ್ಯಾರ್ಥಿಗಳು ಹಳ್ಳಿಯಿಂದ ಶಾಲೆ-ಕಾಲೇಜುಗಳಿಗೆ ಕಲಕೇರಿಗೆ ಹೋಗಲು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಸ್ ವ್ಯವಸ್ತೆ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಆಗ್ರಹಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ವಿಜಯಪುರ ಜಿಲ್ಲೆಯ ತಾಳಿಕೋಟೆ ಘಟಕದ ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಡಿವಿಪಿ ತಾಲೂಕು ಸಂಚಾಲಕ ಕಾಶಿನಾಥ್ ತಾಳಿಕೋಟಿ, “ಆಲಗೂರ, ಹುಣಸ್ಯಾಳ ಗ್ರಾಮಗಳಿಂದ ಕಲಕೇರಿಗೆ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲ. ಅಲ್ಲೊಂದು ಇಲ್ಲೊಂದು ಬಸ್ ಇದ್ದರೂ ಸರಿಯಾದ ಸಮಯಕ್ಕೆ ಬರುವುದಿಲ್ಲ. ಇದರಿಂದ ಖಾಸಗಿ ವಾಹನಗಳಿಗೆ ತಿಂಗಳಿಗೆ ಒಂಬೈನೂರು ರೂಪಾಯಿಗಳನ್ನು ಕೊಟ್ಟು ಬರುವಂತಾಗಿದೆ. ಇದರಿಂದ ಪಾಲಕರಿಗೆ ಆರ್ಥಿಕ ಹೊರೆಯಾಗಿದೆ. ಹಾಗಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಿ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ; ವಾರ್ಡನ್ ಅಮಾನತು
“ಅಗಸ್ಟ್ 15ರ ಒಳಗಾಗಿ ಬಸ್ ವ್ಯವಸ್ಥೆ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು” ಎಂದು ದೇವರಹಿಪ್ಪರಗಿ ದಲಿತ ವಿದ್ಯಾರ್ಥಿ ಪರಿಷತ್ ಸಹಸಂಚಾಲಕ ಕಾಶಿನಾಥ್ ತಾಳಿಕೋಟೆ ಆಗ್ರಹಿಸಿದರು.
ಈ ಸಂಧರ್ಭದಲ್ಲಿ ಆಲಗೂರಿನ ಭಗತ್ ಸಿಂಗ್ ಯುವ ಸಂಘಟನೆಯ ವಲಯ ಅಧ್ಯಕ್ಷ ರವಿ ಹೊಕ್ರಾಣಿ, ಕಲಕೇರಿ ಬಸವೇಶ್ವರ ಕಾಲೇಜಿನ ಪ್ರಧಾನ ಕಾರ್ಯದರ್ಶಿ ಪ್ರಕಾಶ ಹಾಗೂ ಸಂಘಟನೆಯ ಪದಾಧಿಕಾರಿಗಳು ಇದ್ದರು.