ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

Date:

Advertisements

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, “ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ 2 ಅವಧಿಯಿಂದ ಭಾರತ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಹಿಂದಕ್ಕೆ ತಳ್ಳಿದೆ. ಕಾರ್ಪೊರೇಟ್ ಶ್ರೀಮಂತರ ಪರವಾದ ಆರ್ಥಿಕತೆ ಮತ್ತು ಮತೀಯ ದ್ವೇಶದ ರಾಜಕಾರಣವು ದೇಶದ ಭವಿಷ್ಯವನ್ನು ಹಾಳುಗೆಡವಿದೆ” ಎಂದಿದ್ದಾರೆ.

ರೈತ ಕಾರ್ಮಿಕ ವರ್ಗದ ಬದುಕು ಶೋಚನೀಯ ಹಂತಕ್ಕೆ ತಲುಪಿತ್ತು ನಿರುದ್ಯೋಗ ಪ್ರಮಾಣ ಕಂಡು ಕೇಳರಿಯದಷ್ಟು ಏರಿಕೆಯಾಗಿದೆ. ಈವರೆಗೂ ಚುನಾವಣೆಗಳಲ್ಲಿ ನೀಡಿದ ಭರವಸೆಗಳೆಲ್ಲವನ್ನು ಈಡೇರಿಸದೆ, ಕೇವಲ ಮತೀಯ ಉನ್ಮಾದ ಸೃಷ್ಟಿಸಿ ಪ್ರಶ್ನಿಸುವವರ ವಿರುದ್ಧ, ಧ್ವನಿಯನ್ನು ಹತ್ತಿಕ್ಕುವ, ದೇಶದ ಸಂವಿಧಾನದ ಆಶಯಗಳಿಗೆ ಗಾಸಿಗೊಳಿಸುವ ಫ್ಯಾಸಿಸ್ಟ ಮಾದರಿಯ ಸರ್ವಾಧಿಕಾರ ದೋರಣೆಯನ್ನು ಅನುಸರಿಸಿದ ಜನವಿರೋಧಿ ಪಕ್ಷವನ್ನು ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಿಸಬೇಕೆಂದರು.

ನರೇಂದ್ರ ಮೋದಿ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಿದೆ ಯುವಜನ ವಿರೋಧಿಯಾಗಿ ವರ್ತಿಸಿದೆ. 2012ರ ಅವಧಿಯಲ್ಲಿ ಪ್ರತಿವರ್ಷ ಕನಿಷ್ಠ 70ಲಕ್ಷ ಸೃಷ್ಟಿಯಾಗುತ್ತಿದ್ದ ಉದ್ಯೋಗ ಮೋದಿ ಆಡಳಿತದ ಅವಧಿಯಲ್ಲಿ ಸಂಪೂರ್ಣವಾಗಿ ಕುಸಿದಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಡಿ ಖಾಲಿ ಬಿದ್ದಿರುವ 9.64 ಲಕ್ಷ ಉದ್ಯೋಗವನ್ನು ಈವರೆಗೂ ಭರ್ತಿಗೊಳಿಸಲು ಕ್ರಮಗಳಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸೆಂಟರ್ ಆಫ್ ಮಾನಿಟರಿಂಗ್ ಇಂಡಿಯನ್ ಎಕಾನಿನ್ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ 2014 ರಲ್ಲಿ ಶೇ.5.44 ಇದ್ದಿದ್ದು. 2023 ಅಕ್ಟೋಬರ್ ತಿಂಗಳಿಗೆ ಶೇ. 10.05ರಷ್ಟು ತಲುಪಿದೆ. ಇದು ದೇಶದ ಯುವ ಜನರ ನಿರುದ್ಯೋಗ ಸಮಸ್ಯೆಯ ಕಾರಣಕ್ಕೆ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಈ ಬಗ್ಗೆ ನ್ಯಾಶನಲ್ ಕ್ರೈಮ್ ರೆಕಾರ್ಡ ಬ್ಯೂರೋ (NCRB) ವರದಿ ಪ್ರಕಾರ ಪ್ರತೀ ಗಂಟೆಗೆ ಇಬ್ಬರು ನಿರುದ್ಯೋಗಿ ಯುವಕರು ಆತ್ಮಹತ್ಯೆಗೆ ಶರಣಾಗಾಗುತ್ತಿರುವುದು ಏನೆಂದರೆ ನಿರುದ್ಯೋಗದ ಕರಾಳತೆ ಎಷ್ಟಿರಬೇಕೆಂದು ಅರ್ಥ ಮಾಡಿಕೊಳ್ಳಬೇಕು ಎಂದರು.

ಈ ಹಿನ್ನಲೆಯಲ್ಲಿ ವಿಜಯಪುರ ಮತದಾರರು ಪ್ರಧಾನವಾಗಿ ಯುವ ಜನರು, ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ, ಅವರನ್ನು ಸೋಲಿಸಿ, ಜಾತ್ಯಾತೀತ ಪಕ್ಷ ಇಂಡಿಯಾ ಒಕ್ಕೂಟದ ಅಭ್ಯರ್ಥಿ ರಾಜು ಆಲಗೂರ ರವರನ್ನು ಬೆಂಬಲಿಸಬೇಕು ಎಂದು ಜಿಲ್ಲೆಯ ಯುಜನರಲ್ಲಿ ಡಿವಾಯ್‌ಎಫ್‌ಐ ವಿನಂತಿಸಿದೆ.

ಈ ವೇಳೆ ಜಿಲ್ಲಾ ಅಧ್ಯಕ್ಷ ರಮೇಶ ಸಾಸಾಭಾಳ, ತಾಲೂಕಾ ಕಾರ್ಯದರ್ಶಿ ಮುಪ್ತಿಸೋಯಬ್ ಬ್ಯಾಕೋಡ, ಆದಮ ಜಮಾದರ, ಶಾಂಭವಿ ಬೋರಗಿ, ಯೂನಿಸ್ ರಾಯಚೂರ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X