ವಿಜಯಪುರ | ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಪರಿಹಾರ

Date:

ಮೂಢನಂಬಿಕೆ, ಹಸಿವು, ಬಡತನದಂತಹ ಸಾಮಾಜಿಕ ಸಮಸ್ಯೆಗೆ ಶಿಕ್ಷಣವೊಂದೇ ಪರಿಹಾರ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಬೇಕು ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್‌ ಟಿಯೋಲ್‌ ಮಾಚಾದೊ ಹೇಳಿದರು.

- Advertisement -

ನಗರದ ಸಂತಮ್ಮನವರ ದೇವಾಲಯದ ಸಭಾಂಗಣದಲ್ಲಿ ಜಸ್ವಿಟ್ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ ಹಾಗೂ ಅದರ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಜಿಲ್ಲೆಯ ಜಸ್ವಿಟ್ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ ಹಾಗೂ ಅದರ ಅಂಗ ಸಂಸ್ಥೆಗಳು ಜಿಲ್ಲೆಯಾದ್ಯಂತ ಬಡವರ ಮಕ್ಕಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸುತ್ತಾ ಬಂದಿವೆ. ಪ್ರತಿ ಮಗುವಿನ ಶಿಕ್ಷಣ, ಸಾಮಾಜಿಕ ಜೀವನ ಸೇರಿ ವೈಯಕ್ತಿಕ ಬೆಳವಣಿಗೆಗೂ ಪೂರಕವಾಗುವಂತಹ ಪರಿಸರವನ್ನು ಈ ಟ್ರಸ್ಟ್‌ಗಳು ನಿರ್ಮಾಣ ಮಾಡುತ್ತಿವೆ. ಶಿಕ್ಷಣ ಉದ್ಯಮವಾಗಿರುವ ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
WhatsApp Image 2025 03 10 at 7.15.53 PM

ಸೊಸೈಟಿಯ ಫಾದರ್ ಫ್ರಾನ್ಸಿಸ್ ಮೆನೇಜಸ್ ಮಾತನಾಡಿ, “ನೂರಾರು ಮಕ್ಕಳಿಗೆ ವಿದ್ಯಾರ್ಥಿ ವೇತನ ದೊರೆಯಲಿದ್ದು ಎಲ್ಲರೂ ಶಿಕ್ಷಣ ಪಡೆದು ಮಾದರಿ ಜೀವನ ರೂಪಿಸಿಕೊಳ್ಳಿ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಬದುಕಿನ ಮೌಲ್ಯ ಪರಸ್ಪರ ಸಹಾಯ ಸಹಕಾರ ಮನೋಭಾವ ಹಾಗೂ ಸಾಮಾಜಿಕ ಕಳಕಳಿ ಬೆಳಸಿಕೊಳ್ಳುವುದು ಕೂಡ ತುಂಬಾ ಅಗತ್ಯವಾದದ್ದು. ಪ್ರಸ್ತುತವಾಗಿ ಮಾನವೀಯ ಮೌಲ್ಯಗಳು ಮರೆಯಾಗುತ್ತವೆ. ಇದು ಸಮಾಜಕ್ಕೆ ಮಾರಕವಾದದ್ದು. ಆದ್ದರಿಂದ ಮಾನವೀಯ ಮೌಲ್ಯಗಳು ಅಳವಡಿಸಿಕೊಂಡು ಪರೋಪಕಾರಿ ಜೀವನ ಸಾಗಿಸಲು ಎಲ್ಲಾ ವಿದ್ಯಾರ್ಥಿಗಳು ಮುಂದಾಗಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೈಪಿಡಿ ಬಿಡುಗಡೆ

ಕಾರ್ಯಕ್ರಮದಲ್ಲಿ ಲಾಯಲ ಪದವಿ ಪೂರ್ವ ಕಾಲೇಜು ನಿರ್ದೇಶಕ ಫಾದರ್ ರೊನಾಲ್ಡೊ ಸೇರಾವೋ, ಲಾಯಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಪ್ರಾಂಶುಪಾಲ ಫಾದರ್ ಸಂತೋಷ್ ಫರ್ನಾಂಡಿಸ್, ಸಂತ ಅಣ್ಣಮ್ಮನವರ ದೇವಾಲಯದ ವಾಜ್‌ ಧರ್ಮಗುರು ಫಾದರ್ ಜೋಸೆಫ್, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...