ವಿಜಯಪುರ | ಯುವಜನರಿಗೆ ಉದ್ಯೋಗ ಹಕ್ಕು ಖಾತ್ರಿಪಡಿಸಿ : ಬಸವರಾಜ ಪೂಜಾರ

Date:

Advertisements

ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಉದ್ಯೋಗ, ಶಿಕ್ಷಣ ಸಿಗದೆ ಹತಾಶೆಯಲ್ಲಿರುವಾಗ, ಆಳುವ ಸರ್ಕಾರಗಳು ಪರಿಹಾರ ಒದಗಿಸುವ ಬದಲು ಹುಸಿ ಭರವಸೆ ನೀಡಿ ವಂಚಿಸುತ್ತ ಅವರನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

‌ವಿಜಯಪುರ ಜಿಲ್ಲೆ ಸಿಂದಗಿ ನಗರದ ಡಿಎಸ್ಎಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲೂಕು ಸಮಿತಿಯಿಂದ ಆಯೋಜಿಸಿದ್ದ ‘ಸಾಮರಸ್ಯ, ಉದ್ಯೋಗ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ’ ನಡೆದ ಸಿಂದಗಿ ತಾಲೂಕಾ ಡಿವೈಎಫ್ಐ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

“ಉದ್ಯೋಗ ಸೃಷ್ಟಿಯ ಆಮಿಷವೊಡ್ಡುವ ಸರ್ಕಾರಗಳು ಕೈಗಾರಿಕೆ ಸ್ಥಾಪಿಸಲು ಕಾ‌ರ್ಪೊರೇಟ್ ಕುಳಗಳು ಹಾಗೂ ದೇಶಿ- ವಿದೇಶಿ ಬಂಡವಾಳಿಗರಿಗೆ ಭೂಮಿ ನೀಡುತ್ತಿವೆ. ಆದರೆ ಆ ಕಂಪನಿಗಳು ಕೈಗಾರಿಕೆ ಆರಂಭಿಸದೇ ಇರುವುದರಿಂದ ಉದ್ಯೋಗ ಸೃಷ್ಟಿ ಬರೀ ಭಾಷಣದಲ್ಲಿ ಉಳಿಯುತ್ತದೆ. ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕು. ಉದ್ಯೋಗ ಕೊಡಲಾಗದಿದ್ದರೆ, ನಿರುದ್ಯೋಗಿ ಯುವಜನರಿಗೆ ಮಾಸಿಕ ₹10,000 ನಿರುದ್ಯೋಗ ಭತ್ಯೆ ಕೊಡಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

Advertisements

“ದೇಶದಲ್ಲಿ ನಿರುದ್ಯೋಗ ಪ್ರಮಾಣ ವಿಪರೀತವಾಗಿ ಏರುತ್ತಿದೆ. ಉದ್ಯೋಗ ಸೃಷ್ಟಿಸಲು ವಿಫಲವಾದ ಕೇಂದ್ರ ಸರ್ಕಾರ ಕೇವಲ ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ತಂದು ರಾಜಕೀಯ ಲಾಭಕ್ಕೆ ಹವಣಿಸುತ್ತಿರುವುದು ಜನತೆಗೆ ಎಸಗುತ್ತಿರುವ ದ್ರೋಹ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ನೀಡಿದ ಮಾಹಿತಿಯಂತೆ ಕೇಂದ್ರ ಸರ್ಕಾರದಡಿ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿಗೊಳಿಸಲು ಇ‌ಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ” ಎಂದರು.

ಯುವನಿಧಿ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಒತ್ತಾಯ

“ನಿರುದ್ಯೋಗಿ ಯುವಜನರಿಗೆ ಯುವನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಆದರೆ, ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಯೋಜನೆ ಅನ್ವಯಿಸಿರುವುದರಿಂದ, ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯಾವುದೇ ಆಸರೆ ಸಿಗುವುದಿಲ್ಲ. ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಿ, ಅಧ್ಯಯನ ಮುಗಿಸಿ ಕನಿಷ್ಟ 10 ವರ್ಷದಿಂದ ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಈ ಸೌಲಭ್ಯವನ್ನು ಖಾತ್ರಿಪಡಿಸಬೇಕು” ಎಂದು ಆಗ್ರಹಿಸಿದರು.

ಡಿವೈಎಫ್ಐ ಕಲಬುರಗಿ ಜಿಲ್ಲಾ ನಾಯಕಿ ಲವಿತ್ರ ಕೆ ಎನ್ ಮಾತನಾಡಿ, “ರಾಜ್ಯದಲ್ಲಿ ಶಾಲೆ, ಕಾಲೇಜು ಹಾಗೂ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಗುತ್ತಿಗೆ- ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸೇವಾಭದ್ರತೆಯಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ಇವರೆಲ್ಲರಿಗೂ ಸೇವಾಭದ್ರತೆ ಒದಗಿಸಬೇಕು” ಎಂದರು.

“ರಾಜ್ಯದಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು, ಅವುಗಳ ಭರ್ತಿ ಹಾಗೂ ಆದ್ಯತಾ ಕ್ಷೇತ್ರವಾರು ಉದ್ಯೋಗ ಸೃಷ್ಟಿಗೆ ಬಜೆಟ್‌ನಲ್ಲಿ ಚಕಾರ ಎತ್ತದಿರುವುದು ಯುವಜನರನ್ನು ನಿರ್ಲಕ್ಷಿಸಿರುವುದಕ್ಕೆ ಹಿಡಿದ ಕನ್ನಡಿ” ಎಂದರು.

“ಡಿವೈಎಫ್ಐ ಇದೀಗ ʼಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿʼ ಎಂಬ ಘೋಷಣೆಯಡಿ 12ನೇ ರಾಜ್ಯ ಸಮ್ಮೇಳನವನ್ನು 2024ರ ಫೆಬ್ರವರಿ 25, 26, 27ರಂದು ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಹಮ್ಮಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡು ಈ ಮೇಲ್ಕಂಡ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಹಾಗೂ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಉತ್ತಮ ಕವಿಯಾಗಲು ಬದ್ಧತೆ ಮತ್ತು ವಿಶ್ವಾಸ ಅಗತ್ಯ : ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು

ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಅಧ್ಯಕ್ಷ ಅಣ್ಣಾರಾಯ ಈಳಗೇರ, ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ ಈರಣ್ಣ ಬೆಳ್ಳುಂಡಗಿ, ತಾಲೂಕು ಮುಖಂಡರಾದ ರಮೇಶ ತಳವಾರ, ಮುಪ್ತಿ ಶೋಯೆಬ್ ಬ್ಯಾಕೋಡ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಅಂಗನವಾಡಿ ನೌಕರ ಸಂಘದ ಪ್ರತಿಭಾ ಕುರಡಿ, ಭರಮಣ್ಣ, ಆದಂ ಜಮಾದಾರ್, ಸಾವಿತ್ರ ಬಡಿಗೇರ, ಶಾಂಭವಿ ಕೊಟಾರಗಸ್ತಿ, ಸವಿತಾ ಕೊಕಟನೂರ, ಶಾಂತಪ್ಪ, ಯೂನುಸ್ ರಾಯಚೂರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X