ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ

Date:

ಸರ್ಕಾರಿ ಆಸ್ಪತ್ರೆಯ ಅಧೀನದಲ್ಲಿ ಓದುತ್ತಿರುವ ಸರ್ಕಾರಿ ಜಿಎನ್‌ಎಮ್, ಪ್ಯಾರಾ ಮೆಡಿಕಲ್, ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹಣ ವಸೂಲಿ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿಜಯಪುರ ಕರ್ನಾಟಕ ಸ್ಟೇಟ್ ನರ್ಸಿಂಗ್ ವೆಲ್ಫೇರ್ ಅಸೋಸಿಯೇಷನ್ ಒತ್ತಾಯಿಸಿತು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ದಾವೂದ್ ನಾಯ್ಕೋಡಿ, “ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳೆಲ್ಲ ಬಡ ಕುಟುಂಬದಿಂದ ಬಂದವರು. ಅವರಿಂದ ಕಾಲೇಜಿಗೆ ಸಂಬಂಧಿಸಿದ ಅಧಿಕಾರಿ ವರ್ಗ ಮತ್ತು ಕಾಲೇಜಿನ ಮುಖ್ಯಸ್ಥರೇ ಹಣ ಪೀಕುತ್ತಿರುವುದು ಖಂಡನೀಯ. ಎಕ್ಸಾಮ್, ಸ್ಪೋರ್ಡ್ಸ್, ಕೋರ್ಸ್ ಮುಗುಸಿ ಇಂಟರ್ನ್ಶಿಪ್ ನಲ್ಲಿರುವ ವಿದ್ಯಾರ್ಥಿಗಳಿಗೆ ಗಿಫ್ಟ್ ನೀಡಲು 700 ರೂಪಾಯಿ ಕೊಡಬೇಕು ಇಲ್ಲವಾದರೆ ನಿಮ್ಮ ಡಾಕ್ಯುಮೆಂಟ್ಸ್ ಮತ್ತು ಇಂಟರ್ನ್ಶಿಪ್ ಪ್ರಮಾಣ ಪತ್ರ ನೀಡುವುದಿಲ್ಲವೆಂದು ವಿದ್ಯಾರ್ಥಿಗಳಿಗೆ ಅನಗತ್ಯ ಬೆದರಿಕೆ ಹಾಕಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಷ್ಟೋ ವಿದ್ಯಾರ್ಥಿಗಳು ಕೋರ್ಸ್ ಮುಗಿದ ಬಳಿಕ ಹಣ ಕೊಡಲು ಸಾಧ್ಯವಾಗದೇ ಸಂಬಂಧಪಟ್ಟ ದಾಖಲೆಗಲನ್ನು ತಮ್ಮ ಅಲ್ಲೇ ಬಿಟ್ಟಿದ್ದಾರೆ. ಇದರಿಂದ ಎಷ್ಟೋ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕು ಎಂದು ಮನವಿ ಮಾಡಿರುವ ಅವರು, ಕ್ರಮಕ್ಕೆ ಮುಂದಾಗದಿದ್ದರೆ, ಮುಂದಿನ ದಿನಗಳಲ್ಲಿ ಸಂಸ್ಥೆಯು ಹೋರಾಟ ಮಾಡಲು ಮುಂದಾಗುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಈ ವೇಳೆ ಕರ್ನಾಟಕ ಸ್ಟೇಟ್ ನರ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಮಹಾಂತೇಶ್ ಎಚ್, ಮಾದೇಶ್ ಚಲವಾದಿ, ಶಂಕರ್ ಬಸರಗಿ, ಅಕ್ಷಯ್ ಹಾದಿಮನಿ, ಯಮನೂರಿ ಮಾದರ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...