ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

Date:

ಕಳೆದ ಜೂನ್ ತಿಂಗಳಿನಿಂದ ಇದುವರೆಗೆ ಸುರಿದ ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಪಟ್ಟಣದ ಡಾ. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ತಹಸೀಲ್ದಾ‌ರ್ ವೈ ಎಸ್ ಸೋಮನಕಟ್ಟಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಸಾಕಷ್ಟು ರೈತರ ಬೆಳೆಗಳು ಸಂಪೂರ್ಣ ನಷ್ಟಗೊಂಡಿವೆ. ಜೊತೆಗೆ ಜಿಲ್ಲೆಯ ಭೀಮಾ, ಕೃಷ್ಣಾ ಹಾಗೂ ಡೋಣಿ ನದಿಯ ಪ್ರವಾಹದಿಂದಾಗಿಯೂ ಸಾಕಷ್ಟು ನಷ್ಟಗೊಂಡಿವೆ. ಜಿಲ್ಲಾಡಳಿತಕ್ಕೂ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿ ಕೂಡಲೇ ಪರಿಹಾರ ಮತ್ತು ಫಸಲ್ ಬಿಮಾ ಯೋಜನೆಯಡಿ ವಿಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಜಿಲ್ಲೆಯ 13 ತಾಲೂಕಿನಲ್ಲಿ ಸಮೀಕ್ಷೆ ಹೆಸರಲ್ಲಿ ವಿಳಂಬ ಮಾಡದೇ ಪ್ರತಿಯೊಂದು ಹಳ್ಳಿಯ ರೈತರಿಗೆ 1 ಎಕರೆ ಒಣ ಬೇಸಾಯಕ್ಕೆ ₹50 ಸಾವಿರ, ನೀರಾವರಿಗೆ 1 ಲಕ್ಷ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 2 ಲಕ್ಷ ನಷ್ಟ ಪರಿಹಾರ ನೀಡಬೇಕು. ಜಂಟಿ ಸಮೀಕ್ಷೆ, ವೈಮಾನಿಕ ಸಮೀಕ್ಷೆ ಹೆಸರಲ್ಲಿ ತಡ ಮಾಡದೇ ಕೂಡಲೆ ಪರಿಹಾರ ನೀಡಬೇಕು” ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಮಾತನಾಡಿ, “ಈ ವರ್ಷ ಹಿಂದೆಂದೂ ಕಂಡಿರದ ಮಳೆ ಹಾಗೂ ಪ್ರವಾಹ ಉಂಟಾಗಿ ಬಸವನಬಾಗೇವಾಡಿ ತಾಲೂಕಿನ ಎಲ್ಲಾ ರೈತರ ತೊಗರಿ, ಹತ್ತಿ, ಸೆಂಗಾ ಸೇರಿದಂತೆ ತೋಟಗಾ ರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಲಿಂಬೆ ಸೇರಿ ಎಲ್ಲ ಬೆಳೆಗಳು ಮಳೆಗೆ ಹಾನಿಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ಎಲ್ಲಾ ರೈತರಿಗೂ ಪರಿಹಾರ ನೀಡಬೇಕು” ಎಂದರು.

ಇದನ್ನೂ ಓದಿ: ವಿಜಯಪುರ | ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮನವಿ

ರೈತ ಸಂಘದ ತಾಲೂಕು ಅಧ್ಯಕ್ಷ ಮುದಕಣ್ಣ ಹೊರ್ತಿ, ಮುತ್ತು ಹಾಲ್ಯಾಳ, ರೇವಣಸಿದ್ದ ಮಣೂರ, ಜಿಲ್ಲಾ ಸಂಚಾಲಕ ಜಕರಾಯ ಪೂಜಾರಿ, ಕೊಲ್ದಾರ ತಾಲೂಕಾಧ್ಯಕ್ಷ ಸೋಮು ಬಿರಾದಾರ ಮಾತನಾಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನಕಾರ್ಯದರ್ಶಿ ರಾಮನಗೌಡ ಪಾಟೀಲ, ಜಿಲ್ಲಾ ಸಂಚಾಲಕ ಸಂಗಪ್ಪ ಟಕ್ಕೆ, ನಗರ ಘಟಕದ ಅಧ್ಯಕ್ಷ ಸಚಿನ ಸವನಳ್ಳಿ, ತಾಲೂಕು ಉಪಾಧ್ಯಕ್ಷ ನಾಮದೇವ ರಾಠೋಡ, ಶಶಿಕಾಂತ ಬಿರಾದಾರ, ಬಸವರಾಜ ಅಂಬಲಿ, ಪರಶುರಾಮ ಗೊಳಸಂಗಿ, ರಾವುತ ಬರಗಿ, ಸಿದ್ದು ಕುಂಬಾರ, ಬಸವರಾಜ ಬಿಜಾಪುರ, ಬಸಪ್ಪ ಕಾರಜೋಳ, ಅಲ್ಲಾಭಕ್ಷ ಚಪ್ಪರಬಂದ, ದರೇಪ್ಪ ಹೊಸಮನಿ, ಕಾಶಿನಾಥ ಹಾರಿವಾಳ, ಮಲ್ಲಿಕಾರ್ಜುನ ಮೇಲ್ಪಾಪುರ, ಕಲ್ಲಪ್ಪ ಉಳ್ಳಾಗಡ್ಡಿ, ದುಂಡಪ್ಪ ಗೊಳಸಂಗಿ, ಭೀರಪ್ಪ ಸಂಕನಾಳ, ಮುತ್ತಪ್ಪ ಶೆಟ್ಟೆಪ್ಪಗೋಳ, ವೀರಭದ್ರ ಬಡಿಗೇರ, ಮಾಳು ಬಸ್ತಾಳ, ಹಣಮಂತ ಹೊಸಮನಿ, ಶೇಕಪ್ಪ ಮಾದರ ಸೇರಿದಂತೆ ಅನೇಕ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...