ವಿಜಯಪುರ | ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

Date:

ಬರಗಾಲದ ಪರಿಹಾರ ಹಾಗೂ ಕಬ್ಬಿಗೆ ನ್ಯಾಯಯುತ ಬೆಲೆ ಒದಗಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

“ಪ್ರಸಕ್ತ ವರ್ಷದಲ್ಲಿ ತೀವ್ರ ಬರಗಾಲ ಒದಗಿದ್ದು, ಬರಗಾಲಕ್ಕೆ ತಕ್ಕಂತೆ ತಾಲೂಕಿನ ರೈತರಿಗೆ ಸೂಕ್ತವಾದಂತಹ ಬರ ಪರಿಹಾರವನ್ನು ನೀಡಬೇಕು. ಮಳೆ ಬಾರದೆ ಇರುವುದರಿಂದ ರೈತರ ಖುಷ್ಕಿ ಬೆಳೆಗೆ ಎಕರೆಗೆ ಕನಿಷ್ಠ ₹10,000 ಹಾಗೂ ನೀರಾವರಿ ಬೆಳಗ್ಗೆ ಕನಿಷ್ಠ ₹25,000ಗಳನ್ನು ಘೋಷಿಸಿ ತುರ್ತು ಬಿಡುಗಡೆಗೆ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದನ ಕರುಗಳಿಗೆ ಮೇವಿನ ಅಭಾವ ಎದುರಾಗಿರುವುದರಿಂದ ಮೇವು ಬ್ಯಾಂಕ್ ಆರಂಭಿಸಬೇಕು.‌ ಮನರೇಗಾ ಯೋಜನೆ ಅಡಿ ರೈತರ ಹೊಲಗಳಿಗೆ ಕೃಷಿ ಕಾರ್ಮಿಕರನ್ನು ಒದಗಿಸಬೇಕು. ಕೇಂದ್ರ ಸರ್ಕಾರ ಕಬ್ಬಿಗೆ ಬೆಂಬಲ ಬೆಲೆಯಾಗಿ ₹3,364ರಷ್ಟು ಘೋಷಿಸಿದ್ದು, ಇದು ರೈತರಿಗೆ ಲಾಭದಾಯಕ ಬೆಲೆಯಾಗಿರುವುದಿಲ್ಲ. ಇಂತಹ ಬರಗಾಲದಲ್ಲಿ ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು” ಎಂದು ಒತ್ತಾಯಿಸಿದರು.

“ಕಾರ್ಖಾನೆಗಳ ಮಾಲೀಕರು ಮತ್ತು ರೈತರ ನಡುವೆ ಮಧ್ಯಸ್ಥಿಕೆ ವಹಿಸಿ ರೈತರಿಗೆ ಕಾರ್ಖಾನೆಯವರಿಂದ ಕಬ್ಬಿನ ಸಾಗಾಣಿಕೆ ವೆಚ್ಚ, ಕಟಾವು ವೆಚ್ಚವನ್ನು, ಕಟಾವು ಪ್ರಾರಂಭವಾಗುವ ಮುಂಚೆಯೇ ರೈತರ ಸಮ್ಮುಖದಲ್ಲಿ ನಿರ್ಧರಿಸಿ ಸೂಕ್ತ ಬೆಲೆಯನ್ನು ಘೋಷಿಸಿ, ಕಟಾವು ಪ್ರಾರಂಭ ಮಾಡಬೇಕು” ಎಂದು  ಕಬ್ಬು ಬೆಳೆಗಾರರು ಹಾಗೂ ತಾಲೂಕಿನ ರೈತರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ಪ್ರತಿಭಟನೆಯಲ್ಲಿ ಸಂಗಣ್ಣ ಬಾಗೇವಾಡಿ, ವಿಜಯ್ ಪೂಜಾರಿ, ಅಯ್ಯಪ್ಪ ನಿಂಗಪ್ಪ ಬಿದರಕುಂದಿ , ವೈ ಎನ್ ಬಿರಾದರ್, ಹನುಮಂತರಾಯ ಗೌಡ್, ರುದ್ರಪ್ಪ ಅಥಣಿ, ಸಂಗಪ್ಪ ಕಟ್ಟಿ, ಗದಗಯ್ಯ ಹಿರೇಮಠ್, ಶಿವು ಕಟ್ಟಿ, ಮನೋಹರ್ ನಿಡಗುಂದಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...