ವಿಜಯಪುರ | ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆಗೆ ರೈತರ ಆಗ್ರಹ; ಜೂ.30ರಂದು ಬೃಹತ್‌ ಹೋರಾಟ

Date:

Advertisements

ಆಲಮಟ್ಟಿ ಅಣೆಕಟ್ಟೆಯ ಗೇಟನ್ನು 524,256 ಮೀಟರ್‌ಗೆ ಎತ್ತರಿಸಿ, ಕೃಷ್ಣಾ ನೀರಿನ ಬಳಕೆಗೆ ಕ್ರಮ ವಹಿಸಬೇಕು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ಜೂನ್‌ 30ರಂದು ಬೃಹತ್ ಹೋರಾಟ ನಡೆಸಲು ನಿರ್ಧರಿಸಿವೆ.

ವಿಜಯಪುರ ನಗರದ ಗಗನಮಹಲ್‌ನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಮುಖಂಡರು, ಆಲಮಟ್ಟಿ ಡ್ಯಾಂ ಎತ್ತರದ ಬಗ್ಗೆ ಮಹಾರಾಷ್ಟ್ರದವರು ಕ್ಯಾತೆ ತೆಗೆದಿರುವುದು ಖಂಡನೀಯ ಎಂದು ಆಕೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರವು ಮಹಾರಾಷ್ಟ್ರದ ಒತ್ತಡಕ್ಕೆ ಮಣಿಯದೆ ನ್ಯಾಯಾಧೀಕರಣದ ತೀರ್ಷಿನಂತೆ ಗೇಟ್ ಅಳವಡಿಸಲು ಕ್ರಮ ವಹಿಸಬೇಕು. ತೀರ್ಪಿನ ಕುರಿತು, ತಕ್ಷಣ ಅಂತಿಮ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು” ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದರು.‌

Advertisements
ರೈತರ ಸಭೆ

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಅರವಿಂದ ಕುಲಕರ್ಣಿ ಮಾತನಾಡಿ, “ಕೃಷ್ಣಾ 2ನೇ ನ್ಯಾಯಾಧೀಕರಣ ಆಲಮಟ್ಟಿ ಜಲಾಶಯವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಿ ನೀರು ಹಂಚಿ 2010ರಲ್ಲೇ ತೀರ್ಪು ನೀಡಿದೆ. ಆದರೀಗ ಮಹಾರಾಷ್ಟ್ರ ಕೆಲಸವಿಲ್ಲದೆ ಕ್ಯಾತೆ ತೆಗೆದಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರೈತರ ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಧರಣಿ ಖಚಿತ: ಈಶಪ್ಪ ಸರಬದ

“ಅಂತಿಮ ಅಧಿಸೂಚನೆ ಹೊರಡಿಸುವಂತೆ ಪ್ರವಾಹಕ್ಕೆ ಆಲಮಟ್ಟಿ ಡ್ಯಾಂ ಹಿನ್ನೀರು ಕಾರಣವಲ್ಲವೆಂದು ಮಹಾರಾಷ್ಟ್ರ ಸರ್ಕಾರ ನೇಮಿಸಿದ್ದ ತಜ್ಞರ ಸಮಿತಿ 2019ರಲ್ಲೇ ವರದಿ ಸಲ್ಲಿಸಿದೆ. ಆದರೂ ಆ ರಾಜ್ಯದವರು ತಕರಾರು ತೆಗೆಯುತ್ತಿರುವುದು ಸರಿಯಲ್ಲ”‌ ಎಂದರು.

ರೈತ ಸಂಘಟನೆಗಳ ಮುಖಂಡರಾದ ಪಾಂಡು ಹ್ಯಾಟಿ, ವಿಜಯ ಪೂಜಾರಿ, ಶಾರದಾ, ಗುರುಲಿಂಗಪ್ಪ ಪಡಸಲಗಿ, ಬಿರಾದಾರ, ಬಂಡಿವಡ್ಡರ, ಶಂಕರಗೌಡ ಹಿರೇಗೌಡರ, ಉಮೇಶ ವಾಲಿಕಾರ, ರಾಜೇಂದ್ರ ದೇಸಾಯಿ, ಮಡಿವಾಳಪ್ಪ ಕಲಗುರ್ಕಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X