ವಿಜಯಪುರ | ಜಂಬಗಿ ಕೆರೆಗೆ ನೀರು ಹರಿಸಲು ರೈತರ ಆಗ್ರಹ; ಧರಣಿ

Date:

ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ.

- Advertisement -

ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ ಆರಂಭಿಸಿದ್ದರು. ಅಧಿಕಾರಿಗಳು ಮಾತುಕತೆಗೆ ಕರೆದ ಹಿನ್ನೆಲೆ ಧರಣಿಯನ್ನು ಸ್ಥಗಿತಗೊಳಿಸಿ, ಶುಕ್ರವಾರ ಸಭೆಗೆ ಹಾಜರಾಗಿದ್ದರು. ಆದರೆ, ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಲು ಉಪ ವಿಭಾಗಾಧಿಕಾರಿ ಶ್ವೇತಾ ಬೀಡೆಕರ, ತಹಸೀಲ್ದಾ‌ರ್ ಕವಿತಾ ಒಪ್ಪದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮತ್ತೆ ಧರಣಿ ಮುಂದುವರೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಕಗ್ಗೋಡ ಕೆರೆಯಿಂದ 6-7 ಕಿ.ಮೀ ಅಂತರದಲ್ಲಿ ಜಂಬಗಿ ಕೆರೆ ಇದೆ. ಹೀಗಾಗಿ, ಹಳ್ಳದ ಮೂಲಕ ನೀರು ಹರಿಸಿದರೆ, ಶೀಘ್ರವೇ ಕರೆ ತುಂಬುತ್ತದೆ ಎಂಬುದು ರೈತರ ವಾದ. ಆದರೆ, ಸಭೆಯಲ್ಲಿ ಅಧಿಕಾರಿಗಳು ರಾಂಪೂರ ವಿಭಾಗದಿಂದ ಜಂಬಗಿ ಕೆರೆಗೆ ನೀರು ಹರಿಸುವುದಾಗಿ ಹೇಳುತ್ತಿದ್ದಾರೆ.

ಅಧಿಕಾರಗಳ ನಿಲುವಿಗೆ ವಿರೋಧ ವ್ಯಕ್ತಪಡಿಸಿರುವ ರೈತರು, ರಾಂಪೂರ ವಿಭಾಗದಿಂದ ನೀರು ಹರಿಸಿದರೆ ಜಂಬಗಿ ಕೆರೆಗೆ ಸಮರ್ಪಕವಾಗಿ ನೀರು ತಲುಪುವುದಿಲ್ಲ. ಹೀಗಾಗಿ,ಕಗ್ಗೋಡ ಕೆರೆಯಿಂದ ನೀರು ಹರಿಸಿದರೆ, ಮಾತ್ರವೇ ಶಾಶ್ವತ ಪರಿಹಾರ ದೊರೆಯುತ್ತದೆ ಎಂದಿದ್ದಾರೆ.

ಧರಣಿಯಲ್ಲಿ ಮಾತನಾಡಿದ ರೈತ ಮುಖಂಡ ಮಹಾದೇವಪ್ಪ ತೇಲಿ, “ರಾಂಪೂರ ವ್ಯಾಪ್ತಿಯ ಕಾಲುವೆಯಿಂದ ನೀರು ಹರಿಸಿ, ಈ ಬಾರಿ ಕೆರೆ ತುಂಬುವುದು ಅಸಾಧ್ಯ. ಆದರೆ, ಸಮೀಪದ ಕಗ್ಗೋಡ ಕೆರೆಯಿಂದ ಹಳ್ಳದ ಮೂಲಕ ನೀರು ಹರಿಸಿದರೆ, ಕೇವಲ 6-7 ಕಿ.ಮೀ. ಅಂತರದಲ್ಲಿರುವ ಜಂಬಗಿ ಕೆರೆಗೆ ಸರಾಗವಾಗಿ ನೀರು ಹರಿದು ಬರುತ್ತದೆ, ಕೆರೆ ತುಂಬುತ್ತದೆ. ಇಳಿಜಾರು ಮಾರ್ಗದಲ್ಲಿ ಹಳ್ಳ ಹರಿಯುವುದರಿಂದ ವಿಶೇಷವಾಗಿ ಯಾವುದೇ ಖರ್ಚಿಲ್ಲದೇ ಜಂಬಗಿ ಕೆರೆ ತುಂಬಿಸಬಹುದು” ಎಂದಿದ್ದಾರೆ.

ಧರಣಿಯಲ್ಲಿ ರೈತ ಮುಖಂಡ ಪ್ರಕಾಶ ತೇಲಿ, ಗ್ರಾಪಂ ಅಧ್ಯಕ್ಷ ಶ್ರೀಶೈಲ ಮಸೂತಿ, ಆಹೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗಾಣಗೇರ, ಪ್ರಭು ಕಾರಜೋಳ, ಜಯಸಿಂಗರಜಪೂತ, ಚಿನ್ನಪ್ಪವಾಡೇದ, ಅನಮೇಶ ಜಮಖಂಡಿ, ನಿಜಲಿಂಗಪ್ಪ ತೇಲಿ, ಬಸನಗೌಡ ಬಿರಾದಾರ, ಮಲ್ಲಿಕಾರ್ಜುನ ನಾಗರಾಣ, ಬಸವಂತ ತೇಲಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...