ವಿಜಯಪುರ | ಮಳೆಗಾಲದಲ್ಲಿ ರೈತರು ಜಾಗೃತರಾಗಿರಿ: ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೆಮ್ಮ

Date:

ಈಗಾಗಲೇ ಮುಂಗಾರು ಆರಂಭವಾಗಿದ್ದು, ಅಹಿತಕರ ಘಟನೆಗಳಾಗುವ ಸಂಭವ ಹೆಚ್ಚಿದೆ. ಹಾಗಾಗಿ ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರ ಸೇರಿದಂತೆ ಕೃಷಿ ಚಟುವಟಿಯಲ್ಲಿ ತೊಡಗಿರುವಾಗ ಜಾಗೃತಿ ವಹಿಸಿ ಕೆಲಸ ಮಾಡಿ ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

- Advertisement -

“ಮಳೆಗಾಲದಲ್ಲಿ ಕರೆಂಟ್ ಎಷ್ಟು ಹೊತ್ತಿಗೆ ಬೇಕಾದರೂ ಬರಬಹುದು, ಹಾಗಾಗಿ ರೈತ ಬಾಂಧವರು ಕರೆಂಟ್ ಇರುವುದಿಲ್ಲ ಎಂದು ತಿಳಿದು ಯಾವುದೇ ರೀತಿಯ ವಿದ್ಯುತ್ ಕಂಬ, ತುಂಡಾಗಿರುವ ವೈರ್‌ಗಳನ್ನು ಸುರಕ್ಷಾ ಸಾಧನಗಳಲ್ಲದೆ ಮುಟ್ಟಬಾರದು. ಮಳೆಗಾಲದಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳಿಂದ ದೂರ ಇರಬೇಕು. ಹೊಲದಲ್ಲಿ ಲೈನ್ ತುಂಡಾಗಿದ್ದರೆ, ವಿದ್ಯುತ್ ಸಮಸ್ಯೆ ಇದ್ದರೆ ತಕ್ಷಣ ಕೆಇಬಿ ಅವರಿಗೆ ಕರೆ ಮಾಡಿ ತಿಳಿಸಬೇಕು”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

“ಹೊಲದ ಬೋರ್ವೆಲ್ ಹಾಗೂ ಕೆನಾಲ್ ಕಾಲುವೆಗಳಲ್ಲಿನ ಮೋಟರ್‌ಗಳನ್ನು ಹಾಗೂ ಅವುಗಳಿಗೆ ಸಂಪರ್ಕವಾಗಿರುವ ವೈರ್ ಗಳ ಕುರಿತು ಜಾಗೃತಿ ವಹಿಸಬೇಕು. ಯಾವುದೇ ಟ್ರಾನ್ಸ್‌ಫಾರ್ಮರ್ ಕೆಲಸಗಳಲ್ಲಿ ಲೈನ್ ಮೆನ್ ಸಹಾಯ ಪಡೆದು ಕೆಲಸ ನಿರ್ವಹಿಸಬೇಕು.‌ ಮಳೆಗಾಲ ಜೋರಾಗುತ್ತಿರುವುದರಿಂದ ತುಂಬಾ ವಿದ್ಯುತ್ ಅನಾಹುತಗಳು ಸಂಭವಿಸುತ್ತಿರುತ್ತವೆ. ರೈತ ಈ ದೇಶದ ಬೆನ್ನೆಲುಬು, ಪ್ರತಿ ರೈತನ ಜೀವವು ಅತ್ಯಮೂಲ್ಯ, ರೈತರು ಹೊಲಗಳಲ್ಲಿ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...