ವಿಜಯಪುರ | ರೈತರ ಸಮಸ್ಯೆಗಳ ಪರಿಹಾರಕ್ಕೆ ರೈತಸಂಘ ಆಗ್ರಹ

Date:

ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶಿಲ್ದಾರ್ ಸುರೇಶ ಮುಂಚೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಜಿಲ್ಲಾಧ್ಯಕ್ಷ ಸಂಗಮಕ ಸಗರ, “ತಾಲೂಕಿನಲ್ಲಿ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿದ್ದು, ಸಂಪೂರ್ಣ ನಷ್ಟವಾಗಿದೆ. ವಿಪತ್ತು ನಿರ್ವಹಣಾ ಕಾನೂನಿನಡಿ ಪ್ರತಿ ಹೆಕ್ಟೇರ್‌ಗೆ ರಾಜ್ಯ ಸರ್ಕಾರದಿಂದ 8,500 ಮತ್ತು ಕೇಂದ್ರ ಸರ್ಕಾರದಿಂದ 8,500 ರೂ. ಪರಿಹಾರ ನೀಡಬೇಕು. ಆದರೆ, ಕೇಂದ್ರ ಸರ್ಕಾರ ನೀಡಿದ ಪರಿಹಾರದಲ್ಲಿಯೇ 2,000 ಕಡಿತ ಮಾಡಲಾಗಿದೆ. ಇದು ಖಂಡನೀಯ. ಕಡಿತ ಮಾಡಲಾದ ಹಣವನ್ನು ಕೂಡಲೇ ರಾಜ್ಯ ಸರ್ಕಾರ ಸೇರಿಸಿ ಒಟ್ಟಾರೆ 10,500 ರೂ. ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಬರಗಾಲ ಪರಿಹಾರ ಸಮೀಕ್ಷೆ ಸರಿಯಾಗಿ ಮಾಡದೇ, ಬೇಜಬ್ದಾರಿಯಿಂದ ಹೊರಗುತ್ತಿಗೆ ಮೂಲಕ ಮನಸ್ಸಿಗೆ ಬಂದ ಹಾಗೆ ಸರ್ವೇ ಮಾಡಿ ಕೈ ತೊಳೆದುಕೊಂಡಿದ್ದಾರೆ. ಆದರೆ, ನಿಜವಾಗಿ ತಾಲೂಕಿನ ಎಲ್ಲ ನಷ್ಟಗೊಂಡ ರೈತರಿಗೆ ಪರಿಹಾರ ಒದಗಿಸಬೇಕು. ಅದನ್ನು ಮತ್ತೊಮ್ಮೆ ಕೂಲಂಕುಷವಾಗಿ ಪರಿಶೀಲಿಸಿ ಆಗಿರುವ ಸಮಸ್ಯೆಯನ್ನು
ಮುಂಗಾರು ಕೆಲವೇ ದಿನಗಳಲ್ಲಿ ಪ್ರಾರಂಭ ವಾಗುತ್ತಿರುವುದರಿಂದ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಗುಣಮಟ್ಟದ, ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ ಹಾಗೂ ಯಂತ್ರೋಪಕರಣಗಳನ್ನು ಆವ ಶ್ಯಕತೆಗೆ ಅನುಗುಣವಾಗಿ ಸರಿಯಾದ ಸಮಯಕ್ಕೆ ಸಂಗ್ರಹಿಸಿಟ್ಟುಕೊಳ್ಳಬೇಕು. ಮಾರುಕಟ್ಟೆಯಲ್ಲಿ ಅತೀ ಹೆಚ್ಚಿನ ಬೆಲೆಗೆ ಬಿತ್ತನೆಬೀಜ, ಗೊಬ್ಬರ, ಕೀಟನಾಶಕ ಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕೂಡಲೇ ಬಗೆಹರಿಸಿ ಎಲ್ಲಾ ರೈತರಿಗೂ ಪರಿಹಾರ ನೀಡಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ರೈತ ಸಂಘದ ಗೌರವಾಧ್ಯಕ್ಷ ಗಿರೀಶ ಕುಲಕರ್ಣಿ, ಮಹಿಳಾ ಅಧ್ಯಕ್ಷೆ ಸಂಗೀತಾ ರಾಠೋಡ, ಜಿಲ್ಲಾ ಸಂಚಾಲಕ ನಜೀರ ನಂದರಗಿ, ತಾಲ್ಲೂಕು ಸಂಚಾಲಕ ಮಹಾದೇವ ಕದಮ್, ಕಲಕೇರಿ ಹೋಬಳಿ ಅಧ್ಯಕ್ಷ ಮಹಿಬೂಬ ಬಾಷಾ ಮನಗೂಳಿ, ಹೊನವಾಡ ಸಂಚಾಲಕ ಖಾದರ ವಾಲಿಕಾರ, ಪ್ರದಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗುಗ್ಗರಿ, ಕಾಶಿನಾಥ ದೇವನಾಯಕ, ಸಿದ್ದಪ್ಪ ಕೊಟ್ಟಲಗಿ, ಸುಧಾಕರ ನಲವಡೆ, ಅಮೀನಸಾಬ ಕೋಟಿ, ವಿಲಾಸ ಮಾನವರ, ಅರ್ಜುನ ಸಾಳ್ವಂಕೆ, ಉಮೇಶ ಕದಮ್, ಗಂಗಾರಾಮ ಪವಾರ, ಶ್ರೀಕಾಂತ ಪಾರ, ಸಿದ್ದರಾಯ ಗಗನಮಾಲಿ, ಸಾತಲಿಂಗಯ್ಯ ಸಾಲಿಮಠ, ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 371(ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂವಿಧಾನದಲ್ಲಿ ನೀಡಲಾಗಿರುವ 371(ಜೆ) ಅನುಷ್ಠಾನಕ್ಕೆ ಆಗ್ರಹಿಸಿ 371(ಜೆ)...

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ...

ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ....

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ...