ವಿಜಯಪುರ | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Date:

ರಾಜ್ಯದ ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಕಾನೂನು ತಿದ್ದುಪಡಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಬಸವನ ಬಾಗೇವಾಡಿ ತಾಲೂಕಿನ ಬಸವೇಶ್ವರ ಉದ್ಯಾನವನದಲ್ಲಿ ಇಂದು ಸಭೆ ನಡೆಸಿದ ಬಳಿಕ ಪಾದಯಾತ್ರೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಶಿರಸ್ತೇದಾರ ಎ ಎಚ್ ಬಳೂರಗಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, “ರೈತರಿಗೆ ತಮ್ಮ ಜಮೀನುಗಳಿಗೆ ದಾರಿ ಇಲ್ಲದೆ ತೊಂದರೆಯಾಗುತ್ತಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಆಲಮಟ್ಟಿ ಲಾಲ್‌ ಬಹದ್ದೂರ್ ಶಾಸ್ತ್ರೀ ಜಲಾಶಯ ಹಾಗೂ ನಾರಾಯಣಪುರ ಬಸವ ಸಾಗರ ಜಲಾಶಯಗಳ ನೀರು ಮರು ಹಂಚಿಕೆ ಮಾಡಿ ಜಿಲ್ಲೆಯ ರೈತರಿಗೆ ನ್ಯಾಯ ದೊರಕಿಸಬೇಕೆಂದು” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಗ್ರಾಮೀಣ ಜನತೆಗೆ ನರೇಗಾ ಒಂದು ವರದಾನ: ತಾಲೂಕು ಪಂಚಾಯತಿ ಇಒ ರಾಮು ಅಗ್ನಿ

ಈ ವೇಳೆ ತಾಲೂಕು ಗೌರವಾಧ್ಯಕ್ಷ ವಿಠಲ ಬಿರಾದರ, ತಾಳಿಕೋಟಿ ತಾಲೂಕಾಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ, ಉಪಾಧ್ಯಕ್ಷ ಹೊನಕೇರೆಪ್ಪ ತೆಲಗಿ, ಶಿವಪ್ಪ ಇಂಗಳೇಶ್ವರ, ಈರಣ್ಣ ದೇವರಗುಡಿ, ಚಂದ್ರಾಮ ತೆಗ್ಗಿ ರಾಜೇಸಾಬ ವಾಲಿಕಾರ, ದಾವಲಸಾಬ ನದಾಫ, ಚನ್ನಬಸಪ್ಪ ಸಿಂದೂರ್, ಚೆನ್ನಪ್ಪ ಗೂಡೂರ, ಪರಸು ಹೊಸೂರ, ಪರಶುರಾಮ ಮುತ್ತಗಿ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...