ವಿಜಯಪುರ |  ಫೆ. 12 ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ: ಲಕ್ಷ್ಮಣ ಹಂದ್ರಾಳ

Date:

“ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಫೆಬ್ರುವರಿ 12ರಂದು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಅಖಿಲ ಭಾರತ ಸಾರ್ವತ್ರಿಕ  ಮುಷ್ಕರ ಹಮ್ಮಿಕೊಳ್ಳಲಾಗಿದೆ” ಎಂದು ಜೆಸಿಟಿಯು ಮುಖಂಡರು ಲಕ್ಷ್ಮಣ ಹಂದ್ರಾಳ ಕರೆ ನೀಡಿದರು.

- Advertisement -

ವಿಜಯಪುರ ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರಕಾರ ಕಾರ್ಮಿಕರ ಪರವಾಗಿ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, 4 ಕಾರ್ಮಿಕ ಸಂಹಿತೆಗಳನ್ನು ರೂಪಿಸಿ ಇಎಸ್‌ಐ, ಪಿ.ಎಫ್. ಹಾಗೂ ಬೋನಸ್ ಹಕ್ಕುಗಳಿಂದ ಕಾರ್ಮಿಕರನ್ನು ವಂಚಿತರನ್ನಾಗಿಸುವ ಆತಂಕವಿದೆ. ಇದರ ವಿರುದ್ದ ಮುಷ್ಕರ, ಹೋರಾಟ ಮಾಡಿದರೆ ವೇತನ ಕಡಿತ, ಜೈಲು ಮೊದಲಾದ ಗಂಭೀರ ಶಿಕ್ಷೆ ಪ್ರಕಟಿಸುವ ಅವಕಾಶವನ್ನು ಕಲ್ಪಿಸಿರುವುದು ಹೋರಾಟದ ಶಕ್ತಿಯನ್ನು ದಮನಿಸುವ ಕೆಲಸ ನಡೆದಿದೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಜೆ ಸಿ ಟಿ ಯು ಜಿಲ್ಲಾ ಮುಖಂಡರು ಮಲ್ಲಿಕಾರ್ಜುನ ಎಚ್ ಟಿ ಮಾತನಾಡಿ, “ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿ ಈ ಸಂಹಿತೆಗಳನ್ನು ಅನುಷ್ಠಾನವಾಗದೆ. ಹೀಗಾಗಿ ಕೂಡಲೇ ನೀತಿಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪ ಬಾರದು. ನೀತಿಯನ್ನು ಕೂಡಲೇ ವಿರೋಧಿಸಬೇಕು” ಎಂದರು.

ಕಾರ್ಮಿಕ ಮುಖಂಡ ಎಚ್. ಮಲ್ಲಿಕಾರ್ಜುನ ಮಾತನಾಡಿ, “ಸರ್ಕಾರ ಖಾಸಗೀಕರಣ ಮಾಡುತ್ತಿದೆ. ಮಹಿಳೆಯರಿಗೆ ಸುರಕ್ಷತೆಯ ಅಭಯವಿಲ್ಲದೇ ರಾತ್ರಿ ಪಾಳಿ ಕೆಲಸ ಕಡ್ಡಾಯ ಮಾಡುತ್ತಿದೆ. ಇನ್ನೊಂದೆಡೆ ಕಾರ್ಮಿಕರ ಶೋಷಣೆ ಉದ್ದೇಶವೋ ಎಂಬಂತೆ ಕಾರ್ಪೋರೇಟ್ ಕಂಪನಿಗಳ ಪರವಾಗಿ ನೀತಿ ರೂಪಿಸಿ ಅವರಿಗೆ ರತ್ನಗಂಬಳಿ ಸ್ವಾಗತ ನೀಡುತ್ತಿದೆ” ಎಂದರು.

‘ಸರ್ಕಾರಿ ಹುದ್ದೆಗಳು ಖಾಲಿ ಇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ನಿರಾಸಕ್ತಿ ತೋರುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಯಲ್ಲಿ ಸುರೇಶ ಜಿ.ಬಿ., ಎಚ್.ಟಿ. ಭರತಕುಮಾರ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...