ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಇದೇ ಫೆಬ್ರವರಿ 28 ರಂದು ಹಮ್ಮಿಕೊಂಡಿದ್ದು, ಇದರ ಪ್ರಯುಕ್ತ 26 ರಿಂದ 28ರವರೆಗೆ ಮೂರು ದಿನಗಳ ಕಾಲ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ ಬಿ ಕೆ ತುಳಸೀಮಾಲ ತಿಳಿಸಿದ್ದಾರೆ.
ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು “ಇದೇ 28ರಂದು ನಡೆಯಲಿರುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶರತ್ ಅನಂತಮೂರ್ತಿ ಅವರು ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು
“ನಗರದ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಹೇಳಿದರು.
ಕುಲಸಚಿವ ಶಂಕರಗೌಡ ಸೋಮನಾಳ ಇದ್ದರು.
