ವಿಜಯಪುರ | ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ ವಿದ್ಯಾರ್ಥಿ ಯುವಜನರ ಪ್ರಣಾಳಿಕೆ ಬಿಡುಗಡೆ 

Date:

ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ- ಯುವಜನರ ಬೇಡಿಕೆ ವಿಚಾರಗಳನ್ನು ಸೇರಿಸಲು ಮತ್ತು ಈ ಹಕ್ಕು ಒತ್ತಾಯಗಳೇ ಯುವಜನರ ಮತಗಳನ್ನು ಎಣಿಸುವಂತೆ ಜನಾಭಿಪ್ರಾಯ ಮೂಡಿಸಲು ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವು ಶಿಕ್ಷಣದ ಮೂಲಭಾಗಿದಾರರೊಂದಿಗೆ ಸಮಾಲೋಚಿಸಿ “ವಿದ್ಯಾರ್ಥಿ-ಯುವಜನ ಪ್ರಣಾಳಿಕೆ” ತಯಾರುಗೊಳಿಸಿದೆ. ಎಲ್ಲ ರಾಜಕೀಯ ಪಕ್ಷಗಳು ಈ ಬೇಡಿಕೆಗಳನ್ನು ಈಡೇರಿಸುವ ಪ್ರಮಾಣಿಕ ಪ್ರಯತ್ನ ಮತ್ತು ಬದ್ಧತೆಯನ್ನು ಖಚಿತಪಡಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

- Advertisement -

ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ವಿಜಯಪುರ ಜಿಲ್ಲಾ ಸಮಿತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಟಿ ಉದ್ದೇಶಿಸಿ ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ  ಶ್ರೀನಾಥ್ ಪೂಜಾರಿ ಮಾತನಾಡಿ, “ದೇಶದ ವಿದ್ಯಾರ್ಥಿಗಳು ಮತ್ತು ಯುವಜನರು ಸದಾ ನಡೆಯುತ್ತಿರುವ ಎಲ್ಲ ರಾಜಕೀಯ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜಕೀಯ ಪಕ್ಷಗಳು ಅವರನ್ನು ಲಘುವಾಗಿ ಪರಿಗಣಿಸಬಾರದು” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಳೆದ ಐದು ವರ್ಷಗಳಲ್ಲಿ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ವಿಫಲವಾಗಿದ್ದು, ಗಾಢ ನಿದ್ರೆಗೆ ಜಾರಿದ್ದವು. ಆದರೆ ಮತ್ತೆ ಚುನಾವಣೆ ಬಂದಿದೆ. ಎಲ್ಲ ಪಕ್ಷಗಳು ಮತ್ತೆ ಹೊಸ ಮುಖಗಳೊಂದಿಗೆ ಮತದಾರರನ್ನು ಸೆಳೆಯಲು ಬರುತ್ತಿದ್ದಾರೆ. ಹಾಗಾಗಿ ಇಲ್ಲಿ ಎಲ್ಲ ಪಕ್ಷಗಳಿಗೆ ನಮ್ಮ ವಿದ್ಯಾರ್ಥಿಗಳ ಒಕ್ಕೂಟವು ಅಗ್ರಹಿಸುವುದೇನೆಂದರೆ ಪ್ರಮುಖವಾಗಿ ಶಿಕ್ಷಣ ಖಾಸಗೀಕರಣ ಕೈಬಿಡಬೇಕು. ಶಿಕ್ಷಣವು ಧರ್ಮ ನಿರಿಪೇಕ್ಷಿತವಾಗಿರಬೇಕು. ಶಿಕ್ಷಣವು ಸಮಗ್ರ ಅಭಿವೃದ್ಧಿಗೆ ಹೆಚ್ಚು ಹೊತ್ತು ನೀಡುವಂತಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಪ್ರತಿ ವರ್ಷವೂ ಬಜೆಟ್ಟಿನಲ್ಲಿ ಅನುದಾನವನ್ನು ಕಡಿತ ಮಾಡಿರುವುದನ್ನು ವಾಪಸ್ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರವು ಇನ್ವೆಸ್ಟ್‌ಮೆಂಟ್‌ ಜಾರಿ ತಂದಿರುವುದನ್ನು ಹಿಂಪಡೆದುಕೊಳ್ಳಬೇಕು. ಯುಜಿಸಿಎಲ್ಲಿ ಎಸ್‌ಸಿ/ಎಸ್‌ಟಿ ಮತ್ತು ಬ್ಯಾಕ್ ಲಾಗ್‌ಗಳನ್ನು ರದ್ದು ಮಾಡಿರುವುದನ್ನು ಹಿಂದೆ ತೆಗೆದುಕೊಳ್ಳುವುದು ಪ್ರಮುಖವಾಗಿದೆ” ಎಂದರು.

“ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುತ್ತೇನೆಂದು ಭರವಸೆ ನೀಡಿ ಈವರೆಗೂ ಯಾವುದೇ ರೀತಿಯ ಹೊಸ ನೇಮಕಾತಿ ಮಾಡಿಕೊಂಡಿಲ್ಲದಿರುವುದು ದುರಂತವೇ ಸರಿ. ಕಳೆದ ಹತ್ತು ವರ್ಷಗಳಲ್ಲಿ ಲಕ್ಷಾಂತರ ಉದ್ಯೋಗಗಳು ಸಂಪೂರ್ಣ ಸರ್ವನಾಶವಾಗಿ ಖಾಸಗಿಯವರ ಹಿಡಿತದಲ್ಲಿದ್ದು, ಉದ್ಯೋಗದ ಅಭದ್ರತೆ ಉಂಟಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸಭೆ

“ಉದ್ಯೋಗ ಮೂಲಭೂತ ಹಕ್ಕು, ಸರ್ವರಿಗೂ ಉದ್ಯೋಗ ಕಲ್ಪಿಸುವಂತಹ ಯೋಜನೆ ಜಾರಿಯಾಗಬೇಕು. ದೇಶದ ವಿದ್ಯಾರ್ಥಿಗಳಿಗೆ ಭದ್ರತೆ ಹೆಚ್ಚಿಸುವ ನಿಟ್ಟನಲ್ಲಿ ಕಾರ್ಯಪ್ರವೃತ್ತರಾಗಬೇಕು” ಎಂದು ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ದಲಿತ ವಿದ್ಯಾರ್ಥಿ ಪರಿಷತ್‌ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ, ಎಸ್‌ಐಓ ಅಬ್ದುಲ್ ಜಾವೇದ್, ವಿದ್ಯಾರ್ಥಿ ಮುಖಂಡರಾದ ಸಾಹೇಬಿ, ವಿಜಯಲಕ್ಷ್ಮಿ, ಗುರುಪ್ರಸಾದ ಬಿ ಜಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...