ವಿಜಯಪುರ | ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಶಿಕ್ಷಕರು

Date:

ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

- Advertisement -

ವಿಜಯಪುರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆ ಡಿ.ವಿ ದರಬಾರ್ ಮೆಮೋರಿಯಲ್ ಟ್ರಸ್ಟ್‌ನ ಶಮ್ಸ್ ಶಾಲೆಯಲ್ಲಿ ಘಟನೆ ನಡೆದಿದೆ. ಎರಡನೇ ಸೆಮಿಸ್ಟರ್​ನ ಶಾಲಾ ಬೋಧನಾ ಶುಲ್ಕ ಭರಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಯುನಿಟ್‌ ಕಿರುಪರೀಕ್ಷೆ ಬರೆಯಲು ಅವಕಾಶ ಕೊಡದೆ, ಅವರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಮನೆಗೆ ಕಳಿಸಿದ್ದಾರೆ. 1 ರಿಂದ 6ನೇ ತರಗತಿಯ ಹಲವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ಮನೆಗೆ ಬಂದಿದ್ದು, ಶಾಲೆಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಪರೀಕ್ಷೆಯಿಂದ ವಂಚತರಾದ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಧಾವಿಸಿದ್ದು, ಶಿಕ್ಷಕರನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಪರೀಕ್ಷಾ ಕೊಠಡಿಯಿಂದ ತಮ್ಮ ಮಕ್ಕಳನ್ನು ಹೊರಹಾಕಲಾಗಿದೆ. ಇದು, ಮಕ್ಕಳ ಮನಸ್ಸಿನ ಗಂಭೀರ ಪರಿಣಾಮ ಬೀರುತ್ತದೆ. 2/3 ಸಾವಿರ ರೂಪಾಯಿ ಕಾರಣಕ್ಕೆ ಮಕ್ಕಳನ್ನು ಹೊರಹಾಕಬೇಕಿತ್ತೇ ಎಂದು ಕಿಡಿಕಾರಿದ್ದಾರೆ.

ಕೆಲ ಪೋಷಕರು ತಾವು ಪೂರ್ಣ ಶುಲ್ಕ ಭರಿಸಿದ್ದರೂ, ಮಕ್ಕಳನ್ನು ಪರೀಕ್ಷೆಯಿಂದ ಹೊರ ಕಳಿಸಲಾಗಿದೆ ಎಂದು ಶಿಕ್ಷಕರು ವಿರುದ್ಧ ಹರಿಹಾಯ್ದಿದ್ದಾರೆ. ಆದಾಗ್ಯೂ, “ಮಕ್ಕಳನ್ನು ಪರೀಕ್ಷೆಯಿಂದ ಹೊರಗೆ ಕಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಮೇಲಾಧಿಕಾರಿಗಳಿಗೆ ದೂರು ಕೊಡಿ, ನಾವು ಏನೂ ಮಾಡಲಾಗುವುದಿಲ್ಲ” ಎಂಬ ಉಢಾಫೆಯ ಉತ್ತರವನ್ನು ಶಾಲೆಯ ಆಡಳಿತ ಮಂಡಳಿ ನೀಡಿದೆ ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...