ವಿಜಯಪುರ | ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆ; ಉಪವಾಸ ಸೊರಗಿದ ವಿದ್ಯಾರ್ಥಿಗಳು

Date:

Advertisements

ವಿಜಯಪುರ ನಗರದ ಭೂತನಾಳದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ ಆಹಾರ ದಾಸ್ತಾನು ಕೊರತೆಯಿಂದ ವಿದ್ಯಾರ್ಥಿಗಳು ಉಪವಾಸ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಿಗ್ಗೆ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ವಸತಿ ನಿಲಯದ ಅವಸ್ಥೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯ ಬೇಜವಾಬ್ದಾರಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ವಸತಿ ನಿಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

“ಸುಮಾರು ಐದು ತಿಂಗಳುಗಳಿಂದ ಆಹಾರ ಸರಬರಾಜು ಟೆಂಡರ್‌ದಾರರು ವಸತಿ ನಿಲಯಕ್ಕೆ ಸರಿಯಾಗಿ ಆಹಾರ ಸರಬರಾಜು ಮಾಡುತ್ತಿಲ್ಲ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಇಲಾಖೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ವಿಫಲವಾಗಿರುವುದು ಖಂಡನೀಯ” ಎಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ದೂರಿದರು.

Advertisements

“ಆಹಾರ ದಾಸ್ತಾನು ಟೆಂಡರ್ ಪಡೆದ ಟೆಂಡರ್‌ದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಟೆಂಡರ್ ರದ್ದುಗೊಳಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಣಿಪಾಲ | ಅನಧಿಕೃತ ನಂಬರ್ ಪ್ಲೇಟ್, ಕಿಟಕಿ ಟಿಂಟ್ ಅಳವಡಿಕೆ; ಕಾರು ಚಾಲಕನ ವಿರುದ್ಧ ಎಫ್‌ಐಆರ್‌

ಪ್ರತಿಭಟನಾನಿರತ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ, ವಿದ್ಯಾರ್ಥಿ ಪರಿಷತ್ ಮುಖಂಡರಾದ ದಾವೂದ್ ನಾಯ್ಕೋಡಿ, ಸಂದೇಶ್ ಕುಮಟ್ಗಗೀ, ಶಂಕರ ಬಸರಗಿ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X