ವಿಜಯಪುರ | ಜಾತಿಗಣತಿ ವಿಚಾರ: ಮಾಜಿ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಅಹಿಂದ ಮುಖಂಡರ ಸಭೆ

Date:

Advertisements

ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಜಾತಿವಾರು ಜನಗಣತಿ ಜಾರಿಗಾಗಿ ಒತ್ತಾಯಿಸಲು ಮಾಜಿ ಶಾಸಕರಾದ ರಾಜು ಆಲಗೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಅಹಿಂದ ಮುಖಂಡರಾದ ಎಸ್ ಎಂ ಪಾಟೀಲ ಗಣಿಹಾರ ಮಾತನಾಡಿ, ರಾಜ್ಯದಲ್ಲಿ ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಲು ಈ ಜಾತಿವಾರು ಗಣತಿ ಯಥಾವಾತ್ತಾಗಿ ಜಾರಿಯಾದಾಗ ಮಾತ್ರ ತಳ ಸಮುದಾಯಗಳಿಗೆ ಬಹಳ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಿಸಿದರು.

ಇನ್ನೋರ್ವ ಅಹಿಂದ ಮುಖಂಡರಾದ ಸೋಮನಾಥ ಕಳ್ಳಿಮನಿ ಮಾತನಾಡಿ, ಈ ಅಹಿಂದ ಒಕ್ಕೂಟವು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಪ್ರತಿ ತಾಲೂಕಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಜಿಲ್ಲೆಯ ಪ್ರತಿ ಹಳ್ಳಿಗಳಿಗೂ ಈ ಜಾತಿವಾರು ಜನಗಣತಿಯ ಮಹತ್ವವನ್ನು ತಿಳಿಸಲು ಒಂದು ತಂಡವನ್ನು ರಚಿಸಲಾಗುವದು ಎಂದು ತಿಳಿಸಿದರು.

Advertisements
WhatsApp Image 2024 11 09 at 7.16.20 PM 1 1

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಾಜು‌ ಆಲಗೂರ ಮಾತನಾಡಿ, ಈ ಅಹಿಂದ ಹೋರಾಟ ಪಕ್ಷಾತೀತವಾಗಿ ನಡೆಯಲಿದೆ ಮತ್ತು ಈ ಅಹಿಂದ ಚಳುವಳಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಅಹಿಂದ ಮುಖಂಡರು ತಮ್ಮ ಎಲ್ಲ ಭಿನ್ನಾಭಿಪ್ರಾಯ ಮರೆತು ಕಾಂತರಾಜು ವರದಿಯನ್ನು ಜಾರಿಗೊಳಿಸಲು ಭಾಗವಹಿಸಬೇಕು. ಜಿಲ್ಲೆಯ ಎಲ್ಲರೂ ತಮ್ಮ ಗ್ರಾಮಗಳಲ್ಲಿ ಜನತೆಗೆ ಕಾಂತರಾಜು ವರದಿಯು ಜಾರಿಗೆ ಬಂದರೆ ಏನೆಲ್ಲ ಅನುಕೂಲಗಳಾಗಲಿವೆ ಎಂದು ತಿಳಿಸಲು ಕೋರಿಕೊಂಡರು.

ಇದನ್ನು ಓದಿದ್ದಿರಾ? ಮಂಗಳೂರು | ಅಸಮರ್ಪಕ ರಸ್ತೆಯಿಂದಾಗಿ ಸ್ಕಿಡ್ ಆಗಿ ಬಿದ್ದ ಬೈಕ್: ಟ್ಯಾಂಕರ್ ಹರಿದು ಮಹಿಳೆ ಮೃತ್ಯು

ಸಭೆಯಲ್ಲಿ ದಲಿತ ಮುಖಂಡರಾದ ಅಡಿವೆಪ್ಪ ಸಾಲಗಲ್, ದಸಸಂ ಜಿಲ್ಲಾ ಸಂಚಾಲಕರಾದ ಸಂಜು ಕಂಬಾಗಿ, ದಸಸಂ ಜಿಲ್ಲಾ ಸಂಘಟನಾ ಸಂಚಾಲಕರಾದ ಚನ್ನು ಕಟ್ಟಿಮನಿ, ಅನಿಲ ಹೊಸಮನಿ, ಹಿಂದುಳಿದ ವರ್ಗಗಳ ಮುಖಂಡರಾದ ಜಕ್ಕಪ್ಪ ಎಡವೆ, ಎಂ.ಸಿ. ಮುಲ್ಲಾ, ಹಮೀದ್ ಮುಷರಿಫ್, ಫಯಾಜ ಕಲಾದಗಿ, ಬಿ.ಎಸ್. ಗಸ್ತಿ, ದೇವಾನಂದ ಲಚ್ಯಾಣ, ಪ್ರಭುಗೌಡ ಪಾಟೀಲ, ಎಂ.ಬಿ. ಯಂಕಂಚಿ, ಮಲ್ಲು ಬಿದರಿ ಮತ್ತಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X