ವಿಜಯಪುರ | ದೇಸು ಗೇಮು ಚವ್ಹಾಣ ಕಾಂಗ್ರೆಸ್‌ಗೆ ಮರು ಸೇರ್ಪಡೆ

Date:

ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ಗೆ ಮರುಸೇರ್ಪಡೆಗೊಂಡಿದ್ದಾರೆ. ಅವರ ಸೇರ್ಪಡೆಯಿಂದ ನಾಗಠಾಣ ಮತ್ತು ವಿಜಯಪುರ ಲೋಕಸಭಾ ಮತಕ್ಷೇತ್ರದಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಹೇಳಿದರು.

- Advertisement -

ದೇಸು ಗೇಮು ಚವ್ಹಾಣ ಅವರು ತಮ್ಮ ಬೆಂಬಲಿಗ ಕುಮಟಗಿ ಎಲ್ ಟಿ, ಆಹೇರಿ, ಮದಬಾವಿ, ಹಡಗಲಿ ಹಾಗೂ ಹಿಂದಿನ ಕಾಂಗ್ರೆಸ್ ಸದಸ್ಯರೊಂದಿಗೆ ಪಕ್ಷಕ್ಕೆ ಮರುಸೇರ್ಪಡೆಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದೇಸು ಗೇಮು ಚವ್ಹಾಣ ಮಾತನಾಡಿ, “ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಾಚು ಚವ್ಹಾಣ, ಅಪ್ಪು ಹೀರು ಪವಾರ, ದುಂಡು ದೇನು ಜಾಧವ, ಭಾವಸಿಂಗ ಜಾಧವ, ಸಂತೋಷ ಜಾಧವ, ರಾಜು ಜಾಧವ, ಧೋಂಡು ದೇನು ಜಾಧವ, ಸುರೇಶ ಡಿ ಚವ್ಹಾಣ, ಸೇವು ತುಳಜು ನಾಯಕ, ಮಾನು ಕಾರಬಾರಿ, ಹೂನು ಚವ್ಹಾಣ, ಎಂ ಎಂ ಮುಲ್ಲಾ (ದ್ಯಾಬೇರಿ) ಪಾಂಡು ರಾಠೋಡ, ಧರ್ಮು ರಾಠೋಡ, ಎಂ.ವಾಯ್. ಹಲಗಣಿ ಇವರುಗಳೊಂದಿಗೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಅದರಂತೆ ಇನ್ನು ಮುಂದೆ ಜಿಲ್ಲೆಯ ಪ್ರಭಾವಿ ನಾಯಕರು ಹಾಗೂ ಇಬ್ಬರು ಸಚಿವರುಗಳ ಮತ್ತು ಶಾಸಕರುಗಳ ಮಾರ್ಗದರ್ಶನದಲ್ಲಿ ನಡೆದುಕೊಳ್ಳುತ್ತೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಮಿಕ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀರಾಸಾಬ ಮುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಹಾಜಿಲಾಲ ದಳವಾಯಿ, ಕೃಷ್ಣಾ ಲಮಾಣಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...