ವಿಜಯಪುರ | ಸಹಕಾರ ಸೊಸೈಟಿಯಲ್ಲಿ ಹೆಚ್ಚು ಬಡ್ಡಿಯ ಆಮಿಷವೊಡ್ಡಿ ಕೋಟಿ-ಕೋಟಿ ವಂಚನೆ

Date:

ಹೆಚ್ಚು ಬಡ್ಡಿ ನೀಡುತ್ತೇವೆಂದು ಆಮಿಷವೊಡ್ಡಿ ಜನರಿಂದ ಹಣ ಠೇವಣಿ ಇರಿಸಿಕೊಂಡು, ಈಗ ಹಣ ನೀಡದೆ ವಂಚಿಸಲಾಗುತ್ತಿದೆ ಎಂದು ವಿಜಯಪುರದ ಅಮಾನತ್ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಆರೋಪ ಕೇಳಿಬಂದಿದೆ. ಹಣವನ್ನು ಠೇವಣಿ ಇಟ್ಟವರಿಗೆ ಹಣ ವಾಪಸ್‌ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಠೇವಣಿ ಇಟ್ಟಿದ್ದವರು ಸೊಸೈಟಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

ಹಣ ಠೇವಣಿ ಇರಿಸಿಕೊಂಡು ವಂಚಿಸುವ ಪ್ರಕರಣಗಳು ಆಗಾಗ್ಗೆ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ, ಐಎಂಎಫ್‌ ಬಹುಕೋಟಿ ಹಗರಣ ಬಯಲಾಗಿತ್ತು. ಇದೀಗ, ವಿಜಯಪುರದಲ್ಲಿ ಸಹಕಾರ ಸೊಸೈಟಿ ಅಂತದ್ದೇ ವಂಚನೆ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಮಾನತ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಹಲವಾರು ಗ್ರಾಹಕರು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಠೇವಣಿ ಇರಿಸಿದ್ದರು. ಸುಮಾರು 25ರಿಂದ 30 ಕೋಟಿ ರೂ. ಹಣವನ್ನು ಜನರು ಠೇವಣಿ ಇಟ್ಟಿದ್ದಾರೆ. ಆದರೆ, ಸೊಸೈಟಿಯ ಚೇರ್ಮನ್ ಹಾರುನ್ ರಶೀದ್ ಮಾಶ್ಯಾಳಕರ ಮತ್ತು ಆಡಳಿತ ಮಂಡಳಿ ಹಣವನ್ನು ವಾಪಸ್‌ ಕೊಡುತ್ತಿಲ್ಲವೆಂದು ಆರೋಪಿಸಲಾಗಿದೆ.

ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಹೆಚ್ಚು ಬಡ್ಡಿ ನೀಡುತ್ತೇವೆಂದು ಬಡ ಜನರಿಂದ ಸೊಸೈಟಿ ಹಣ ಠೇವಣಿ ಇರಿಸಿಕೊಂಡಿತ್ತು. ಹಲವಾರು ಜನರು ಎರಡು ವರ್ಷಗಳಿಂದ ಪ್ರತಿ ತಿಂಗಳು ಹಣ ಠೇವಣಿ ಇಟ್ಟಿದ್ದರು. ಆದರೆ, ಈಗ ಹಣ ನೀಡುತ್ತಿಲ್ಲವೆಂದು ಗ್ರಾಹಕರು ಆರೋಪಿಸಿದ್ದಾರೆ.

ಸೊಸೈಟಿಯ ಬ್ಯಾಂಕ್‌ಗೆ ಹೋದರೆ ಸೊಸೈಟಿ ಚೇರ್ಮನ್‌ ಆಗಲೀ, ಮ್ಯಾನೇಜ್ ಆಗಲೀ ಸಿಗುತ್ತಿಲ್ಲ. ಚೇರ್ಮನ್‌ ಮನೆಗೆ ಹೋದರೆ, ಅಲ್ಲಿಯೂ ಅವರು ಇಲ್ಲ ಎನ್ನುತ್ತಾರೆ. ಮ್ಯಾನೇಜರ್ ಮತ್ತು ಸಿಬ್ಬಂದಿಗಳು ಬೇಜವಾಬ್ದಾರಿತನ ಉತ್ತರ ನೀಡುತ್ತಾರೆ ಎಂದು ಗ್ರಾಹಕರು ದೂರಿದ್ದಾರೆ.

“ಸೊಸೈಟಿಯಿಂದ ಯಾರ್ಯಾರಿಗೂ ಸಾಲ ನೀಡಿದ್ದಾರೆ. ಸಾಲ ಪಡೆದವರು ಸೊಸೈಟಿಗೆ ಸಾಲ ಮರುಪಾತಿಸಿಲ್ಲ. ಕಷ್ಟದ ಸಮಯಕ್ಕೆ ಉಪಯೋಗವಾಗುತ್ತದೆ ಎಂದು ಠೇವಣಿ ಇಟ್ಟಿದ್ದ ಹಣ, ನಮ್ಮ ಕಷ್ಟಕ್ಕೆ ದೊರೆಯುತ್ತಿಲ್ಲ” ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...