ವಿಜಯಪುರ | ಜೀಸಸ್ ಮೇರಿ ಜೋಸೆಫ್ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣೆ

Date:

ಗ್ರಾಮೀಣ ಭಾಗದಲ್ಲಿ ಸಾಮಾನ್ಯ ಜನಗಳಿಗೆ ಕೆಲಸಗಳ ನಡುವೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ಇರುವುದಿಲ್ಲ. ಇದನ್ನು ಮನಗಂಡು ನಮ್ಮ ಸಂಸ್ಥೆ ಸುಮಾರು 24 ವರ್ಷಗಳಿಂದ ದೇವರ ಹಿಪ್ಪರಗಿ ತಾಲೂಕಿನ ಹಲವು ಹಳ್ಳಿಗಳಲ್ಲಿ ಉಚಿತ ವೈದ್ಯಕೀಯ ತಪಾಸಣೆ ನಡೆಸುತ್ತಿದೆ ಎಂದು ಸಿಸ್ಟರ್ ಹೃದಯ ಮೇರಿಯವರು ಹೇಳಿದರು.

- Advertisement -

ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ಜೀಸಸ್ ಮೇರಿ ಜೋಸೆಫ್ ಸಂಸ್ಥೆ ಬೆಂಗಳೂರು ಪ್ರಾಂತ್ಯದಿಂದ ನಡೆದ ಉಚಿತ ವೈದ್ಯಕೀಯ ತಪಾಸಣ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಣ್ಣೂರಿನಲ್ಲಿಯೂ ಇಂದು ಆರೋಗ್ಯ ತಪಾಸಣಾ ಶಿಬಿರ ನಡೆಯುತ್ತಿದೆ. ಇಲ್ಲಿನ ಬಹುತೇಕ ಜನರಿಗೆ, ಅದು ಬಹಳ ಮುಖ್ಯವಾಗಿ ಮಹಿಳೆಯರಲ್ಲಿ ಶುಗರ್, ಬಿಪಿ ಅತಿ ಹೆಚ್ಚು ಕಂಡುಬರುತ್ತಿದೆ. ನಿರಂತರವಾಗಿ ತಪಾಸಣೆ ಮಾಡುವುದರ ಮೂಲಕ ರೋಗವನ್ನು ಪತ್ತೆ ಹಚ್ಚಿ ಗುಣಪಡಿಸಲು ನಮ್ಮ ವೈದ್ಯರ ತಂಡ ಕಾರ್ಯಪ್ರವೃತ್ತವಾಗಿದೆ” ಎಂದರು.

“ನಮ್ಮ ಸಂಸ್ಥೆ ನಿರಂತರವಾಗಿ ಹಳ್ಳಿಗಳಿಗೆ ಹೋಗಿ ಜನರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಮೂಲಕ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಲಾಗುತ್ತದೆ” ಎಂದರು.

ಸುಮಾರು ನೂರಕ್ಕೂ ಹೆಚ್ಚು ಮಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದ್ದು, ಇದೇ ವೇಳೆ ಹೆಲ್ತ್ ಕಾರ್ಡ್‌ಗಳನ್ನೂ ಮಾಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಬ್ಬನ್ ಪಾರ್ಕ್‌ | ಬಹುಮಹಡಿ ಕಟ್ಟಡ ವಿವಾದ, ಬೆಂಗಳೂರಿಗರ ಪ್ರತಿಭಟನೆ

ಕಮ್ಯುನಿಟಿ ಮೆಡಿಕಲ್ ಆಫೀಸರ್ ಸಿಸ್ಟರ್ ರುಕ್ಮಣಿ, ಮಣ್ಣೂರು ಗ್ರಾಮದ ಮುಖಂಡರುಗಳಾದ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಉಪಾಧ್ಯಕ್ಷ ಚಂದ್ರಕಾಂತ್ ಶಾತಪ್ಪ ಪ್ಯಾಟಿ,  ಮಣ್ಣೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅಂಬಣ್ಣ ಆನೆಗುಂದಿ, ಗ್ರಾಮಸ್ಥರು, ಸಿಎನ್‌ಎಫ್ ನರ್ಸ್‌ಗಳಾದ ಸಿಸ್ಟರ್ ಶಕುಂತಲಾ, ಶೃತಿ, ಪ್ರೀತಿ, ಕರೀಷ್ಮಾ, ದಾನಯ್ಯ, ಶಾಂತ ದೇಗಿನಾಹಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...