ವಿಜಯಪುರ | ಕೆನರಾ ಬ್ಯಾಂಕ್‌ನಲ್ಲಿ 52 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

Date:

ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ ಈ ಪ್ರಕರಣವೂ ಒಂದಾಗಿದೆ ಎಂದು ಹೇಳಲಾಗಿದೆ.

- Advertisement -

ವಿಜಯಪುರದ ಮನಗುಳಿ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಮೇ 23ರಂದು ಕಳ್ಳತನ ನಡೆದಿದೆ. ಆದರೆ, ಕೃತ್ಯವು ಮೇ 26ರಂದು ಸಿಬ್ಬಂದಿ ಕೆಲಸಕ್ಕೆ ಮರಳಿದಾಗ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬಂದು ಒಂದು ವಾರ ಕಳೆದರೂ ಇನ್ನೂ ಯಾರನ್ನೂ ಪೊಲೀಸರು ಬಂಧಿಸಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಳ್ಳರು 51 ಕಿ.ಗ್ರಾಂ ಚಿನ್ನ ಕಳುವಾಗಿದ್ದರೂ, ಅವರು ಚಿನ್ನಾಭರಣಗಳನ್ನು ಯಾವ ರೀತಿ ಸಾಗಿಸಿದ್ದಾರೆ ಎಂಬ ಮಾಹಿತಿಯೂ ಇನ್ನೂ ಪೊಲೀಸರಿಗೆ ದೊರೆತಿಲ್ಲ ಎನ್ನಲಾಗಿದೆ.

“ಆರೋಪಿಗಳನ್ನು ಬಂಧಿಸಲು ನಾವು ಎಂಟು ತಂಡಗಳನ್ನು ರಚಿಸಿದ್ದೇವೆ. ಕಳ್ಳತನದಲ್ಲಿ 6 ರಿಂದ 8 ಜನರು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ” ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ.

ಇದು ಪೂರ್ವ ಯೋಜಿತ ಕಳ್ಳತನ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೊತೆಗೆ ಕಳ್ಳರು ಅಪರಾಧ ಮಾಡಲು ದೀರ್ಘ ವಾರಾಂತ್ಯಕ್ಕಾಗಿ, ಎರಡನೇ ಶನಿವಾರ ಮತ್ತು ಭಾನುವಾರ ಕಾಯುತ್ತಿದ್ದರು. ನಕಲಿ ಕೀಲಿಯನ್ನು ಬಳಸಿ ಕಳ್ಳರು ಬ್ಯಾಂಕ್‌ಗೆ ಪ್ರವೇಶಿಸಿದ್ದು, ಅಲಾರಂ ಅನ್ನು ಆಫ್ ಮಾಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಅವರು ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಆಫ್ ಮಾಡಿದ್ದು, ನೆಟ್‌ವರ್ಕ್ ವೀಡಿಯೊ ರೆಕಾರ್ಡರ್ (ಎನ್‌ವಿಆರ್) ಅನ್ನು ಕದ್ದೊಯ್ದಿದ್ದಾರೆ ಎಮದು ಅವರು ಹೇಳಿದ್ದಾರೆ. ಕಳ್ಳರು ಬ್ಯಾಂಕ್ ಲಾಕರ್‌ಗಳನ್ನು ಮಾತ್ರ ತೆರೆದು ಚಿನ್ನದೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಕಳ್ಳತನದ ನಂತರ, ಆರೋಪಿಗಳು ಕಪ್ಪು ಬಣ್ಣದ ಗೊಂಬೆಯನ್ನು ಇಟ್ಟು ಹೋಗಿದ್ದು, ಇದು ಅಪರಾಧ ಸ್ಥಳದಲ್ಲಿ ಅವರು ಯಾವುದೋ ಆಚರಣೆಯನ್ನು ಮಾಡಿದ್ದಾರೆ ಎಂದು ತೋರುತ್ತದೆ ಎಂದು ವಿಜಯಪುರ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 28 ರಂದು, ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಿಂದ ಒಂದು ಗ್ಯಾಂಗ್ 13 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಕದ್ದಿದೆ. ನಂತರ ದಾವಣಗೆರೆ ಪೊಲೀಸರು ಅಪರಾಧದಲ್ಲಿ ಭಾಗಿಯಾಗಿದ್ದ ಆರು ಜನರನ್ನು ಬಂಧಿಸಿದ್ದಾರೆ.

ಈ ವರ್ಷದ ಜನವರಿ 17 ರಂದು ಮಂಗಳೂರಿನ ಕೋಟೆಕಾರ್‌ನಲ್ಲಿರುವ ವ್ಯವಸಾಯ ಸೇವಾ ಸಹಕಾರಿ ಸಂಘ ಬ್ಯಾಂಕ್‌ನಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನವನ್ನು ದೋಚಿದ್ದ ತಂಡವೊಂದು ದರೋಡೆ ಮಾಡಿತ್ತು. ಈ ದರೋಡೆಗೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...