ವಿಜಯಪುರ | 225 ಕಳ್ಳತನ ಪ್ರಕರಣಗಳಲ್ಲಿ ₹7 ಕೋಟಿ ಮೌಲ್ಯದ ವಸ್ತುಗಳು ಜಪ್ತಿ; ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್

Date:

ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯೊಳಗೆ ನಡೆದ 225 ಕಳ್ಳತನ ಪ್ರಕರಣಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

- Advertisement -

ಒಟ್ಟಾರೆ 345 ಆರೋಪಿಗಳನ್ನು ಬಂಧಿಸಿ ಅವರಿಂದ ಏಳು ಕೋಟಿ ರೂಗಳಿಗೂ ಅಧಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಿದ ವಸ್ತುಗಳನ್ನು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಾರಸುದಾರರಿಗೆ ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ ಬೃಹತ್ ಪ್ರಾಪರ್ಟಿ ರಿಟರ್ನ್ ಪರೇಡ್ ನಡೆಸಿದ ಎಸ್‌ಪಿ ನಿಂಬರಗಿ, “ಬಂಗಾರ-ಬೆಳ್ಳಿ ಆಭರಣಗಳು, ಬೈಕ್‌ಗಳು, ಐಷಾರಾಮಿ ಕಾರುಗಳು ಟ್ಯಾಕ್ಟರ್‌ಗಳು, ಟಿಪ್ಟರ್‌ಗಳು ಸೇರಿ ಒಟ್ಟು ₹7.02 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ₹3.46 ಕೋಟಿ ಮೌಲ್ಯದ ವಸ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಬಾಕಿ ಉಳಿದ ₹3.56 ಕೋಟಿ ಮೌಲ್ಯದ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ವಾರಸುದಾರರಿಗೆ ನೀಡುವ ಪ್ರಕ್ರಿಯೆ ಮುಂದುವರಿದಿದೆ” ಎಂದು ತಿಳಿಸಿದರು.

ವಿಜಯಪುರ ಕಳ್ಳತನ

“ನಗದು ಹಣ ದೋಚಿದ 19 ಪ್ರಕರಣಗಳಲ್ಲಿನ 31 ಆರೋಪಿಗಳನ್ನು ಬಂಧಿಸಲಾಗಿದೆ. ₹1.91 ಕೋಟಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ. 21 ಇತರೆ ಕಳ್ಳತನ ಪ್ರಕರಣಗಳಲ್ಲಿ 36 ಜನರನ್ನು ಬಂಧಿಸಿ ₹12.42 ಲಕ್ಷ ಮೌಲ್ಯದ ವಿವಿಧ ರೀತಿಯ 143 ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಎಲ್ಲ ಕೃತ್ಯಗಳಲ್ಲಿ ಭಾಗವಹಿಸಿದ್ದ ವಿಜಯಪುರ ಜಿಲ್ಲೆ ಮಾತ್ರವಲ್ಲದೇ, ಬೆಳಗಾವಿ, ವಿಜಯನಗರ, ಬಾಗಲಕೋಟೆ ಹಾಗೂ ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ದೆಹಲಿ ಮೂಲದ ಆರೋಪಿಗಳನ್ನೂ ಪತ್ತೆ ಹಚ್ಚಲಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಎಸ್‌ಆರ್‌ಟಿಸಿ ನೌಕರರಿಗಾಗಿ ಸಾರಿಗೆ ಸುರಕ್ಷಾ ಯೋಜನೆ ಜಾರಿ: ಸಚಿವ ರಾಮಲಿಂಗರೆಡ್ಡಿ

ಪ್ರಾಪರ್ಟಿ ರಿಟರ್ನ್ ಪರೇಡ್‌ನಲ್ಲಿ ಹೆಚ್ಚುವರಿ ಎಸ್‌ಪಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟ ಡಿವೈಎಸ್‌ಪಿ ಬಸವರಾಜ ಯಲಿಗಾರ, ಸುನೀಲ ಕಾಂಬಳೆ, ಟಿ ಎಸ್‌ ಸುಲಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...