ವಿಜಯಪುರ | ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಿಸಲು ಸರ್ಕಾರ ಬದ್ಧ: ಸಚಿವ ಎಂಬಿ ಪಾಟೀಲ ಭರವಸೆ

Date:

ಕಬ್ಬು ಬೆಳೆಗಾರರ ಸಮಗ್ರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತವಾಗಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಮುಖ್ಯಮಂತ್ರಿಗಳು, ಸಕ್ಕರೆ ಸಚಿವರು ಸೇರಿದಂತೆ ಅನೇಕ ಸಚಿವರ ಸಮಕ್ಷಮದಲ್ಲಿ ಈ ವಿಷಯವಾಗಿ ವಿಶೇಷ ಸಭೆ ನಡೆಸಲಾಗುವುದು. ಪ್ರಧಾನ ಮಂತ್ರಿಗಳನ್ನು ಸಹ ಭೇಟಿ ಮಾಡುವ ನಿಟ್ಟಿನಲ್ಲಿಯೂ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಂಬಿ ಪಾಟೀಲ ಭರವಸೆ ನೀಡಿದರು.

- Advertisement -

ವಿಜಯಪುರ ನಗರದ ಗಗನ್ ಮಹಲ್ ಉದ್ಯಾನವನದಲ್ಲಿ ರೈತರು ಹಾಗೂ ಕಬ್ಬು ಬೆಳೆಗರಾರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸಕ್ಕರೆ ಕಾರ್ಖಾನೆಗಳಿಗೆ ಪೂರೈಕೆ ಮಾಡುವ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3500 ದರ ನಿಗದಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ವಿವಿಧ ರೈತಪರ, ಕನ್ನಡ ಪರ ಸಂಘಟನೆಗಳು ಜಂಟಿಯಾಗಿ ಗಗನ್ ಮಹಲ್ ಉದ್ಯಾನವನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲ ಆಲಿಸಿದ ಅವರು, ಕಳೆದ 9 ವರ್ಷಗಳಿಂದ ಸಕ್ಕರೆ ಬೆಲೆ ಪರಿಷ್ಕರಣೆ ಮಾಡದಿರುವುದು, ಎಥನಾಲ್ ಖರೀದಿಸುವಲ್ಲಿ ಕೇಂದ್ರ ಸರ್ಕಾರ ನಿರಾಸಕ್ತಿ ತೋರಿಸುತ್ತಿದೆ. ಈ ಎಲ್ಲಾ ನಿಯಮಾವಳಿಗಳು ಬದಲಾವಣೆಯಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಹ ನಿಯಮಾವಳಿಗಳನ್ನು ಪರಿಷ್ಕರಣೆ ಮಾಡಬೇಕಿದೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸರ್ಕಾರ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರನ್ನು ಶೀಘ್ರದಲ್ಲಿಯೇ ಭೇಟಿ ಮಾಡಲಿದ್ದಾರೆ” ಎಂದು ಭರವಸೆ ನೀಡಿದರು.

WhatsApp Image 2025 11 06 at 12.47.07 PM

“ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೇಂದ್ರ ಸರ್ಕಾರದ ಕಣ್ತೆರೆಸುವ ಕೆಲಸ ಮಾಡಲಿ. ನಿಯೋಗದೊಂದಿಗೆ ಕೇಂದ್ರ ಸರ್ಕಾರವನ್ನು ಭೇಟಿ ಮಾಡಿ ಈ ನಿಯಮಾವಳಿಗಳನ್ನು ಪರಿಷ್ಕರಣೆ ಮಾಡಲಿ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಒಳ್ಳೆಯದು ಮಾಡಲು ಸಮನ್ವಯ ಸಾಧಿಸಬೇಕಾಗುತ್ತದೆ. ಕಬ್ಬು ಬೆಳೆಗೆ ಬೆಲೆ ನಿಗದಿ, ಎಥಿನಾಲ್ ಕರದಿ ಪ್ರಮಾಣ ಹೆಚ್ಚಳ ಮೊದಲಾದ ಮಹತ್ವದ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಬೇಕಿದೆ, ನಾನು ಕೇಂದ್ರ ಸರ್ಕಾರಕ್ಕೆ ದೂರುತ್ತಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಸದಾ ರೈತಪರ, ಬಡವರ ಪರವೇ ಇರುವವರು. ಯಾವ ಸರ್ಕಾರವೂ ಕಬ್ಬಿಗೆ ಬೆಂಬಲ ಬೆಲೆ ನೀಡಿರಲಿಲ್ಲ. ಈ ಹಿಂದೆ ನಮ್ಮ ಸರ್ಕಾರದಲ್ಲಿ ಸಕ್ಕರೆ ಸಚಿವರಾಗಿದ್ದ ಶಾಸಕ ಹುಕ್ಕೇರಿಯವರು ₹350 ಬೆಂಬಲ ಬೆಲೆ ನೀಡಿದ್ದರು. ಇಡೀ ಸರ್ಕಾರವೇ ಕಬ್ಬು ಬೆಳೆಗಾರರ ಪರವಾಗಿದೆ. ಇದರಲ್ಲಿ ಎಳ್ಳಷ್ಟು ಸಂಶಯ ಬೇಡ” ಎಂದರು.

ಹೋರಾಟದ ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಸಕ್ಕರೆ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ಸಹ ನಮ್ಮ ಸಮಸ್ಯೆಗಳ ಬಗ್ಗೆ ಕಾಳಜಿ ತೋರುತ್ತಿಲ್ಲ. ಸಕ್ಕರೆ ಕಾಯ್ದೆ ಪ್ರಕಾರ 15 ದಿನದಲ್ಲಿ ಕಬ್ಬು ಬೆಳೆಗಾರರಿಗೆ ಬಿಲ್ ಪಾವತಿ ಆಗಬೇಕು. ಆದರೆ ಸಕ್ಕರೆ ಕಾರ್ಖಾನೆಗಳು ಈ ನಿಯಮ ಪಾಲಿಸಿಲ್ಲ. ವರ್ಷ ಕಳೆದರೂ ರೈತರಿಗೆ ಬಿಲ್ ಪಾವತಿ ಆಗಿಲ್ಲ. ಒಂದೇ ಒಂದು ಕಾರ್ಖಾನೆ 15 ದಿನದಲ್ಲಿ ಬಿಲ್ ಹಾಕಿದ್ದು ತೋರಿಸಿದರೆ ನಾನೇ ಎಲ್ಲರೂ ಹೇಳಿದಂತೆ ಕೇಳುವೆ. ಈ ಸಕ್ಕರೆ ಕಾರ್ಖಾನೆಗಳು ಸರ್ಕಾರಕ್ಕೇ ಮೋಸ ಮಾಡುತ್ತವೆ; ಇನ್ನು ರೈತರಿಗೆ ಬಿಡುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ವಿಜಯಪುರ | ಸಕ್ಕರೆ ದರ ನಿಗದಿಗೆ ವಿಳಂಬ ಬೇಡ: ಡಿಸಿ ಆನಂದ

ಪ್ರತಿ ಟನ್ ಕಬ್ಬಿಗೆ ₹3500 ದರ ನೀಡುವವರೆಗೂ ನಾವು ಧರಣಿ ಸ್ಥಳ ಬಿಟ್ಟು ಕದಲುವುದಿಲ್ಲ. ತಾವೇ ಮಧ್ಯಸ್ಥಿಕೆ ವಹಿಸಿ ಈ ದರ ಕೊಡಿ ಎಂದು ಸಚಿವರಿಗೆ ರೈತರ ಪರವಾಗಿ ಹಕ್ಕೊತ್ತಾಯ ಮಂಡಿಸಿದರು.

ಕಾರ್ಮಿಕ ಹೋರಾಟಗಾರ ಅಪ್ಪು ಸಾಹೇಬ ಯಾರನಾಳ ಮಾತನಾಡಿ, “ನಿಜವಾಗಿಯೂ ಹೊಲಗಳಲ್ಲಿ ದುಡಿಯುವವರು ಶಾಸನ ಸಭೆಗೆ ಆಯ್ಕೆಯಾಗುತ್ತಿಲ್ಲ. ಈ ಹಿಂದೆ 20 ರಿಂದ 25 ಜನರು ರೈತರಾಗಿ ವಿಧಾನಸಭೆ ಪ್ರವೇಶಿಸುತ್ತಿದ್ದರು. ಆದರೆ ಇಂದು ಅವರ ಕೊರತೆ ಕಾಣುತ್ತಿದೆ. ಅನೇಕ ಹೋರಾಟಗಳ ಸಂದರ್ಭದಲ್ಲಿ ಅಧಿಕಾರಿಗಳು ರೈತರಿಗೆ ಏಕವಚನ ಪ್ರಯೋಗಿಸುತ್ತಾರೆ. ಈ ರೀತಿ ಆಗಬಾರದು. ಅಧಿಕಾರಿಗಳು ನಮ್ಮ ಸೇವಕರು. ರೈತರ ಈ ಬೇಡಿಕೆ ನ್ಯಾಯಯುತವಾಗಿದೆ. ಅನೇಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ರೈತರ ದುಡ್ಡಿನಲ್ಲಿಯೇ ಗೆದ್ದು ಶಾಸಕರಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಮನಗೂಳಿ ಹಿರೇಮಠ ಅಭಿನವ ಸಂಗಮ ಬಸವ ಶಿವಚಾರ್ಯರು ಮಾತನಾಡಿದರು.ೀ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪ ಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಉಮೇಶ ಕಾರಜೋಳ, ಪಂಚಪ್ಪ ಕಲಬುರಗಿ, ಅರವಿಂದ ಕುಲಕರ್ಣಿ, ರಾಮನಗೌಡ ಪಾಟೀಲ, ಫಯಾಜ್ ಕಲಾದಗಿ, ರಾಹುಲ್ ಕುಬಕಡ್ಡಿ, ಸಂದೀಪ ಪಾಟೀಲ, ವಿಜಯ ಜೋಶಿ, ವಿವೇಕ ತಾವರಗೇರಾ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...