ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

Date:

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ್. ಚ. ಪಾಟೀಲ್ ಸರ್ಕಾರವನ್ನು ಎಚ್ಚರಿಸಿದರು.

ವಿಜಯಪುರದಲ್ಲಿ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಇಂದು ರಾಜ್ಯ ವ್ಯಾಪ್ತಿಯಲ್ಲಿ ಗ್ರಾ. ಪಂ ಸದಸ್ಯರು ಗ್ರಾಮೀಣ ಪ್ರಾಂತ್ಯಗಳ ಸಮಸ್ಯೆಗಳು ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅಧಿಕಾರಿಗಳನ್ನು ಜೊತೆಗೂಡಿಸಿಕೊಂಡು ಶ್ರಮಿಸುತ್ತಿರುವದಾಗಿ ತಿಳಿಸಿದರು.

ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳ ಜೊತೆಗೆ ಹಳ್ಳಿಗಳಲ್ಲಿ ಕೆಲಸ ಮಾಡುತ್ತಿದ್ದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ಇವರನ್ನು ಕಡಿಗಣಿಸುವುದು ಮತ್ತು ಗ್ರಾಮ ಪಂಚಾಯಿತಿಯ ಸಾಮಾನ್ಯ  ಸಭೆಗಳಲ್ಲಿ  ಸದಸ್ಯರನ್ನು ನಿರ್ಲಕ್ಷಿಸಿರುವುದಲ್ಲದೆ ಸಾಮಾನ್ಯ ಸಭೆಗೆ ಗೈರಿ ಹಾಜರು ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅದೇ ಸಂದರ್ಭದಲ್ಲಿ ಪಂಚಾಯಿತಿಯ ಮುಂದೆ ಧರಣಿ ಕೂತಿರುವ ಸದಸ್ಯರಿಗೆ ಸುಳ್ಳು ಭರವಸೆ ನೀಡುವುದರ ಮುಖಾಂತರ ಸಮಾಧಾನಪಡಿಸಿರುತ್ತಾರೆ ಹೊರತು ನ್ಯಾಯ ಕೊಡಿಸಿರುವುದಿಲ್ಲ ಎಂದು ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲಾ, ಶಿಡ್ಲಘಟ್ಟ ತಾಲೂಕ, ಜೆ. ವೆಂಕಟಪುರ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಶಶಿಕಲಾ ಅಂಬರೀಶ್ ಅಧಿಕಾರಿಗಳು ವರ್ತಿಸಿದ ವಿಧಾನ ಸರಿಯಲ್ಲ ಎಂದರು.

ಅಲ್ಲಿನ ಪಿಡಿಒ, ಅವರ ಪ್ರಶ್ನೆಗಳಿಗೆ ಸಾಮಾನ್ಯ ಸಭೆಯಲ್ಲಿ ಸರಿಯಾದ ಸಮಾಧಾನ ನೀಡದೆ, ನಿರ್ಲಕ್ಷ್ಯವಾಗಿ ಮತ್ತು ಚಿಟಿಕೆ ಹೊಡೆಯುವುದರ ಮುಖಾಂತರ ಗುಂಡಾವರ್ತನೆ ತೋರಿರುವುದು ಖಂಡನಿಯ ಎಂದರು. ಈಗಾಗಲೇ ಈ ವಿಷಯಕ್ಕೆ ಸಂಬಂಧಪಟ್ಟ  ತಮ್ಮ ಒಕ್ಕೂಟ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರವು ಕೂಡಲೇ ಈ ವಿಷಯದ ಮೇಲೆ ಗಮನಹರಿಸಿ, ಸಂಬಂಧಿತ ಪಿಡಿಒ ಅವರನ್ನು ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಹಿಸಿ, ಸದಸ್ಯರಿಗೆ ನ್ಯಾಯ ಕೊಡಿಸದಿದ್ದರೆ ರಾಜ್ಯಾದ್ಯಂತ ತಮ್ಮ ಒಕ್ಕೂಟ ನೇತೃತ್ವದಲ್ಲಿ ಉಗ್ರಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರ ನೀಡಿದರು.

ಸಮಾಜದಲ್ಲಿ ಗೌರವಕ್ಕಾಗಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಸದಸ್ಯರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ರೀತಿ ನಿರ್ಲಕ್ಷ ಭಾವದಿಂದ ನೋಡಿದರೆ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕೆಟ್ಟು ಹೆಸರು ಬರುವ ಅವಕಾಶ ಇರುವುದರಿಂದ ಮಾನ್ಯ ಪಂಚಾಯತ್ ರಾಜ್ ಸಚಿವರು ಹಾಗೂ ಸಂಬಂಧಿತ ಇಲಾಖೆ  ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರ ಹಕ್ಕುಗಳ ರಕ್ಷಣಾ ಮತ್ತು ಉತ್ತಮ ಆಡಳಿತಕ್ಕಾಗಿ ಕ್ರಮವಹಿಸಲು ಈ ಮೂಲಕ ಪ್ರದೀಪ್. ಚ. ಪಾಟೀಲ್ ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...

ಪೊಲೀಸ್ ಸಿಬ್ಬಂದಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯಕ್ಕಾಗಿ ಕ್ರಮ; ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ.87 ರಷ್ಟು ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ...