ವಿಜಯಪುರ | ಗ್ರಾ.ಪಂ. ಸದಸ್ಯರಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು: ಎಂಎಲ್‌ಸಿ ಸುನಿಲ್ ಗೌಡ ಪಾಟೀಲ್‌

Date:

Advertisements

ನಮ್ಮ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಕೇರಳ ಮಾದರಿಯಲ್ಲಿ ಅನುದಾನ ನೀಡಬೇಕು ಹಾಗೂ ಈ ಹಿಂದೆ ತಾವು ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಅನುದಾನ ಹೆಚ್ಚಿಗೆ ಮಾಡುವಲ್ಲಿ ಶ್ರಮಪಟ್ಟಿದ್ದೇನೆ. ಎಲ್ಲ ಸದಸ್ಯರು ಲಿಖಿತ ರೂಪದಲ್ಲಿ ತಮ್ಮ ಅಹವಾಲನ್ನು ಕೊಟ್ಟರೆ, ಆಯಾ ತಾಲೂಕಿನ ಶಾಸಕರ ಜತೆಗೆ ವಿಚಾರಿಸಿ ಸಮಸ್ಯೆ ನಿವಾರಿಸುವಲ್ಲಿ ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಗೌಡ ಪಾಟೀಲ್‌ ಹೇಳಿದರು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿಕ್ಷಣಾಧಿಕಾರಿಗಳ ಆವರಣದಲ್ಲಿರುವ ಗುರುಭವನದಲ್ಲಿ ನಡೆದ ವಿಜಯಪುರ-ಬಾಗಲಕೋಟೆ ಜಿಲ್ಲೆಯ ಆಡಳಿತಾತ್ಮಕ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು.

ಶಾಸಕ ಯಶವಂತರಾಯ ಗೌಡ ಪಾಟೀಲ ಮಾತನಾಡಿ, “ಸುನೀಲ್ ಗೌಡ ಪಾಟೀಲ್ ಕ್ರಿಯಾಶೀಲರಾಗಿದ್ದಾರೆ. ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಉದ್ದಾರವಾಗುತ್ತೆ. ನಮ್ಮ ಕಾಂಗ್ರೆಸ್‌ ಸರ್ಕಾರ ಹೆಚ್ಚಿನ ಸೌಲಭ್ಯ ಒದಗಿಸುವಲ್ಲಿ ಕಾರ್ಯನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿ ಸದಸ್ಯರು ಮೊ.ಸಂ. 7619287771ಕ್ಕೆ ತಮ್ಮ ಆಹವಾಲುಗಳನ್ನು ಕಳಿಸಬೇಕು” ಎಂದು ಕೋರಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ವಕ್ಫ್‌ ತಿದ್ದುಪಡಿ, ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರ ಒತ್ತಾಯ

ಪುರಸಭೆ ಅಧ್ಯಕ್ಷ ಶ್ರೀ ಲಿಂಬಾಜಿ ರಾಠೋಡ್, ತಾ. ಪಂ ಅಧಿಕಾರಿ ನಂದೀಪ್ ರಾಠೋಡ್, ಉಪವಿಭಗಾಧಿಕಾರಿ ಅಬಿದ್ ಗದ್ಯಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಾವಿದ್ ಮೊಮೀನ್, ಬೋರಾಮಣಿ ಹಾಗೂ ಕಾಂಗ್ರೆಸ್ ಮುಖಂಡ ಪ್ರಶಾಂತ ಕಾಳೆ ಸೇರಿದಂತೆ ಹಲವು ಮುಖಂಡರು, ಇಂಡಿ ತಾಲೂಕಿನ ಎಲ್ಲ ಗ್ರಾ ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X